HomeLatest Newsಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಪೊಲೀಸ್ ಹುದ್ದೆಗಳಿಗೆ ನೇಮಕಾತಿ | Police Recruitment

ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಪೊಲೀಸ್ ಹುದ್ದೆಗಳಿಗೆ ನೇಮಕಾತಿ | Police Recruitment

ಒಟ್ಟು 1,600 ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್/ಡಿಎಆರ್) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆ ದಿನ.

ಒಟ್ಟು ಹುದ್ದೆಯಲ್ಲಿ 1,421 ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 179 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.  ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಸೆ.6ರಂದು ಎರಡೂ ವೃಂದಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಋಣಾತ್ಮಕ ಮೌಲಮಾಪನ‌ ಇರುತ್ತದೆ. ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನೋಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://cetonline.karnataka.gov.in/KEACAR_DAR_2026/Account/Login

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular