HomeKarnatakaರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರಗಳ ಸ್ಥಾಪನೆ: ಮತದಾರರಿಗೆ ದಾಖಲೆಗಳ ಸಕಾಲಿಕ ವಿತರಣೆಗೆ ಸರ್ಕಾರ ಆದೇಶ.!

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರಗಳ ಸ್ಥಾಪನೆ: ಮತದಾರರಿಗೆ ದಾಖಲೆಗಳ ಸಕಾಲಿಕ ವಿತರಣೆಗೆ ಸರ್ಕಾರ ಆದೇಶ.!

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಸಹಾಯ ಕೇಂದ್ರ’ಗಳನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆದೇಶ ಹೊರಡಿಸಿದ್ದು (ಸರ್ಕಾರದ ಆದೇಶ ಸಂಖ್ಯೆ: RDPR 600 GPA 2026, ದಿನಾಂಕ: 20.06.2026), ಗ್ರಾಮ ಪಂಚಾಯಿತಿಯಿಂದ ಜನಸಾಮಾನ್ಯರಿಗೆ ಸಿಗಬೇಕಾದ ಅಗತ್ಯ ದಾಖಲೆಗಳನ್ನು ಯಾವುದೇ ವಿಳಂಬವಿಲ್ಲದೆ ಸಕಾಲದಲ್ಲಿ ಒದಗಿಸುವುದು ಈ ಕೇಂದ್ರಗಳ ಮುಖ್ಯ ಉದ್ದೇಶವಾಗಿದೆ.

ಯಾರು ನಿರ್ವಹಿಸಲಿದ್ದಾರೆ ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಹಾಯ ಕೇಂದ್ರಗಳನ್ನು ಆಯಾ ಪಂಚಾಯಿತಿಯಲ್ಲಿರುವ ‘ಬಾಪೂಜಿ ಸೇವಾ ಕೇಂದ್ರ’ದ ಮೂಲಕ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್‌ಗಳು ನಿರ್ವಹಿಸಲಿದ್ದಾರೆ. ಈ ಕೇಂದ್ರಗಳ ಒಟ್ಟಾರೆ ಉಸ್ತುವಾರಿಯನ್ನು ಆಯಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ನೋಡಿಕೊಳ್ಳಲಿದ್ದಾರೆ.

ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಪ್ರಾಧಿಕಾರಗಳ ಚುನಾವಣೆ ಪ್ರಕ್ರಿಯೆ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಕೈಬಿಟ್ಟು ಹೋಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಾಯ ಕೇಂದ್ರವನ್ನು ತೆರೆದು ಗ್ರಾಮ ಪಂಚಾಯಿತಿಯಿಂದ ನಿಯಮಾನುಸಾರ ನೀಡಬೇಕಾಗಿರುವ ದಾಖಲೆಗಳನ್ನು ವಿಳಂಬಕ್ಕೆ ಅವಕಾಶವಿಲ್ಲದೆ ಸಕಾಲದಲ್ಲಿ ಜನಸಾಮಾನ್ಯರಿಗೆ ತಲುಪುವುದನ್ನು ಖಾತ್ರಿಪಡಿಸಿಕೊಳ್ಳುವುದು ಅಗತ್ಯವಿರುತ್ತದೆ. ಈ ಉದ್ದೇಶಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯ ಕೇಂದ್ರವನ್ನು ಪ್ರಾರಂಭಿಸಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ ಈ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಸಂಖ್ಯೆ: RDPR 600 GPA 2026, ಬೆಂಗಳೂರು ದಿನಾಂಕ: 20.06.2026. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಪ್ರಾಧಿಕಾರಗಳ ಚುನಾವಣೆ ಪ್ರಕ್ರಿಯೆ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಕೈಬಿಟ್ಟು ಹೋಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಗ್ರಾಮ ಪಂಚಾಯಿತಿಯಿಂದ ನಿಯಮಾನುಸಾರ ನೀಡಬೇಕಾಗಿರುವ ದಾಖಲೆಗಳನ್ನು ವಿಳಂಬಕ್ಕೆ ಅವಕಾಶವಿಲ್ಲದೆ ಸಕಾಲದಲ್ಲಿ ಜನಸಾಮಾನ್ಯರಿಗೆ ತಲುಪುವುದನ್ನು ಖಾತ್ರಿಪಡಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯ ಕೇಂದ್ರಗಳನ್ನು ಪ್ರಾರಂಭಿಸಲು ಆದೇಶಿಸಿದೆ. ಈ ಸಹಾಯ ಕೇಂದ್ರಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸತಕ್ಕದ್ದು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಸಹಾಯ ಕೇಂದ್ರದ ಒಟ್ಟಾರೆ ಉಸ್ತುವಾರಿ ನೋಡಿಕೊಳ್ಳಲು ಆದೇಶಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular