ಹೈದರಾಬಾದ್: ಆಂಧ್ರಪ್ರದ್ರೇಶದ ಅನಕಾಪಲ್ಲಿಯ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ.
ಅನಕಾಪಲ್ಲಿಯ ದಕ್ಷಿಣ ಎನರ್ಜಿ ಇಂಡಸ್ಟ್ರಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಫ್ಯಾಕ್ಟರಿ ಧಗ ಧಗನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಹಲವರು ಕಾರ್ಖಾಅನೆಯ ಒಳಗೆ ಸಿಲುಕಿಕೊಂಡಿದ್ದು, ರಕ್ಷಣಾಕಾರ್ಯಾಚರಣೆ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಜ್ವಾಲ ಕ್ಷಣ ಕ್ಷಣಕ್ಕೂ ಸುತ್ತಮುತ್ತಲೂ ವ್ಯಾಪಿಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

