HomeKarnatakaBREAKING: ಉದಯೋನ್ಮುಖ ನಿರ್ದೇಶಕ ಮಂಜುನಾಥ್ ಆತ್ಮಹತ್ಯೆ

BREAKING: ಉದಯೋನ್ಮುಖ ನಿರ್ದೇಶಕ ಮಂಜುನಾಥ್ ಆತ್ಮಹತ್ಯೆ

ಬೆಂಗಳೂರು: ಉದಯೋನ್ಮುಖ ಯುವ ನಿರ್ದೇಶಕರೊಬ್ಬರು ಮಾನಸಿಕ ಖಿನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಬಿದಲೂರಿನ ನಿವಾಸಿ ಮಂಜುನಾಥ್ (35)ಆತ್ಮಹತ್ಯೆಗೆ ಶರಣಾದವರು. ಕಿರುಚಿತ್ರಗಳನ್ನು ನಿರ್ದೇಶಿಸಿದ್ದ ಮಂಜುನಾಥ್, ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಬೇಕು ಎಂಬ ಮಹದಾಸೆ ಹೊಂದಿದ್ದರು. ಆದರೆ ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿರಲಿಲ್ಲ. ಇದರಿಂದ ನಿರಾಶರಾಗಿದ್ದರು. ಅಲ್ಲದೇ ಹಲವು ದಿನಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಕಂಪನಿಯೊಂದರಲ್ಲಿ ಕೆಲಸವನ್ನು ಮಾಡುತ್ತಿದ್ದರು. ಆದಾಗ್ಯೂ ಖಿನ್ನತೆಯಿಂದ ಹೊರಬರಲಾಗದೇ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. ಡೆತ್ ನೋಟ್ ನಲ್ಲಿ ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಬಿಡಿ. ನಿಮಗೆ ಒಳ್ಳೆಯ ಮಗನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular