HomeSportsಮಹಿಳಾ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ನಾಯಕಿ ಚಾಮರಿ ಅಥಾಪತ್ತು ವಿಶ್ವ ದಾಖಲೆ: ಈ ಸಾಧನೆ ಮಾಡಿದ...

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ನಾಯಕಿ ಚಾಮರಿ ಅಥಾಪತ್ತು ವಿಶ್ವ ದಾಖಲೆ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ಕ್ರಿಕೆಟರ್

ಮಹಿಳಾ ಕ್ರಿಕೆಟ್ ಲೋಕದಲ್ಲಿ ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಥಾಪತ್ತು ಹೊಸ ಇತಿಹಾಸ ಬರೆದಿದ್ದಾರೆ. ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಗುರಿ ಬೆನ್ನಟ್ಟುವಾಗ (ರನ್ ಚೇಸ್) ಶತಕ ಬಾರಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಜೂನ್ 23 ರಂದು ಬ್ರಿಸ್ಟಲ್‌ನ ಕೌಂಟಿ ಗ್ರೌಂಡ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಗ್ರೂಪ್ ಬಿ ಪಂದ್ಯದಲ್ಲಿ ಅವರು ಈ ಅಭೂತಪೂರ್ವ ಸಾಧನೆ ಮಾಡಿದರು.

ಐರ್ಲೆಂಡ್ ನೀಡಿದ್ದ 131 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದ 36 ವರ್ಷದ ಎಡಗೈ ಬ್ಯಾಟರ್ ಚಾಮರಿ ಅಥಾಪತ್ತು, ಕೇವಲ 61 ಎಸೆತಗಳಲ್ಲಿ 17 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 106 ರನ್ ಚಚ್ಚಿದರು. ಇವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ತಂಡ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಶೆಮೈನ್ ಕ್ಯಾಂಪ್ಬೆಲ್ ದಾಖಲೆ ಬ್ರೇಕ್ ಇದಕ್ಕೂ ಮುನ್ನ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಯಶಸ್ವಿ ರನ್ ಚೇಸ್ ಮಾಡುವಾಗ ದಾಖಲಾದ ಗರಿಷ್ಠ ಸ್ಕೋರ್ ಎಂಬ ದಾಖಲೆ ವೆಸ್ಟ್ ಇಂಡೀಸ್‌ನ ಶೆಮೈನ್ ಕ್ಯಾಂಪ್ಬೆಲ್ ಹೆಸರಿನಲ್ಲಿತ್ತು. ಅವರು ಇತ್ತೀಚೆಗಷ್ಟೇ ಅಂದರೆ ಜೂನ್ 13 ರಂದು ನ್ಯೂಜಿಲೆಂಡ್ ವಿರುದ್ಧ ಅಜೇಯ 90 ರನ್ ಗಳಿಸಿದ್ದರು. ಈಗ ಚಾಮರಿ ಅಥಾಪತ್ತು ಶತಕ ಸಿಡಿಸುವ ಮೂಲಕ ಆ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟ ಪಂದ್ಯದಲ್ಲಿ ಚಾಮರಿ ಅಥಾಪತ್ತು ಮೊದಲ ವಿಕೆಟ್‌ಗೆ ಸಹ ಆಟಗಾರ್ತಿ ಇಮೇಶಾ ದುಲಾನಿ ಅವರೊಂದಿಗೆ ಸೇರಿ 72 ಎಸೆತಗಳಲ್ಲಿ 98 ರನ್‌ಗಳ ಅಮೂಲ್ಯ ಜೊತೆಯಾಟ ಆಡಿದರು. ಇಮೇಶಾ ದುಲಾನಿ 27 ಎಸೆತಗಳಲ್ಲಿ 20 ರನ್ ಗಳಿಸಿ ಚಾಮರಿಗೆ ಉತ್ತಮ ಸಾಥ್ ನೀಡಿದರು.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4ನೇ ಶತಕ ಈ ವರ್ಷದ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ಆಡಿದ ನಾಲ್ಕನೇ ಪಂದ್ಯದಲ್ಲಿ ಚಾಮರಿ ಈ ಶತಕದ ಸಾಧನೆ ಮಾಡಿದ್ದಾರೆ. ಇದು ಮಹಿಳಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ 4ನೇ ಶತಕವಾಗಿದೆ. ಮಹಿಳಾ ಟಿ20ಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಯುಎಇ ಬ್ಯಾಟರ್ ಈಶಾ ಓಜಾ (5 ಶತಕ) ಮೊದಲ ಸ್ಥಾನದಲ್ಲಿದ್ದರೆ, ಚಾಮರಿ ಅಥಾಪತ್ತು ಎರಡನೇ ಸ್ಥಾನದಲ್ಲಿದ್ದಾರೆ.

ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಜಗತ್ತಿನ 8ನೇ ಆಟಗಾರ್ತಿ ಹಾಗೂ ಶ್ರೀಲಂಕಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಚಾಮರಿ ಪಾತ್ರರಾಗಿದ್ದಾರೆ. ವಿಶ್ವಕಪ್ ಪಂದ್ಯವೊಂದರಲ್ಲಿ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಅವರು 2014 ರಲ್ಲಿ ಐರ್ಲೆಂಡ್ ವಿರುದ್ಧ 126 ರನ್ ಗಳಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular