HomeLatest Newsಅಕ್ರಮ ಆಸ್ತಿ, ಹವಾಲಾ ವ್ಯವಹಾರ ಸೇರಿ ಹಲವು ಆರೋಪದ ಮೇಲೆ ಅಬಕಾರಿ ಹೆಚ್ಚುವರಿ ಆಯುಕ್ತ ವೈ...

ಅಕ್ರಮ ಆಸ್ತಿ, ಹವಾಲಾ ವ್ಯವಹಾರ ಸೇರಿ ಹಲವು ಆರೋಪದ ಮೇಲೆ ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ಮೇಲೆ ಇಡಿ ದಾಳಿ

ಬೆಂಗಳೂರು: ಹವಲಾ ವ್ಯವಹಾರ ನಡೆಸಿರುವುದು, ವಿದೇಶದಲ್ಲಿ ಹೂಡಿಕೆ, ಬೇನಾಮಿ ಹೆಸರಿನಲ್ಲಿ ಆಸ್ತಿ,ಸಂಪಾದನೆ ಅಕ್ರಮವಾಗಿ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆದಿರುವುದು ಆದಾಯಕ್ಕಿಂತ ಹೆಚ್ಚಿನ ಆದಾಯ ಹೊಂದಿದ ಆರೋಪದ ಮೇಲೆ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ಇಡಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು,ಮೈಸೂರು,ಬೆಳಗಾವಿ ದಾವಣಗೆರೆ ವಿಜಯನಗರ ಸೇರಿದಂತೆ ಒಟ್ಟು ಆರು ಕಡೆ ಏಕ ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಆಪಾರ್ಟ್ ಮೆಂಟ್ ನಲ್ಲಿ ಕುಟುಂಬದವರ ಜೊತೆ ವಾಸವಾಗಿದ್ದ ಮಖಜುನಾಥ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅಗತ್ಯ ಕಂಡು ಬಂದರೆ ಬಂಧಿಸುವ ಸಾಧ್ಯತೆ ಇದೆ. ಲೋಕೋಪಯೋಗಿ ಸಚಿವ ಸತೀ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬಳ್ಳಾರಿ ಮಾಜಿ ಸಂಸದ ಎನ್ ವೈ ದೇವೇಂದ್ರಪ್ಪ ಪುತ್ರರಾಗಿರುವ ವೈ ಮಂಜುನಾಥ್ ಕಾನೂನು ಬಹಿರವಾಗಿ ಅಕ್ರಮ ವಾಸತಿ ಸಂಪಾದನೆ ಮಾಡಿದ್ದರಿಂದ ಆರೋಪದ ಮೇಲೆ ಕರ್ನಾಟಕ ಮತ್ತು ಗೋವಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಬೆಳಿಗ್ಗೆಯಿಂದಲೇ ಅಧಿಕಾರಿಗಳು ಬೆಳಗಾವಿ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ವೈ. ಮಂಜುನಾಥ್ ಅವರ ನಿವಾಸ,ಬೆಂಗಳೂರಿನಲ್ಲಿರುವ ಮಂಜುನಾಥ್ ಅವರಿಗೆ ಸೇರಿದ ಅಪಾರ್ಟ್‍ಮೆಂಟ್.ಮೈಸೂರಿನಲ್ಲಿರುವ ಅವರ ಮಹಿಳಾ ಸ್ನೇಹಿತೆಯ ನಿವಾಸ,ಅರಸೀಕೆರೆ ಮತ್ತು ಅಥಣಿ ತಾಲೂಕಿನ ಐನಾಪುರದಲ್ಲಿರುವ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ವೈ. ಮಂಜುನಾಥ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು, ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು, ಬಾರ್ ಅಂಡ್ ರೆಸ್ಟೋರೆಂಟ್‍ಗಳು ಸೇರಿದಂತೆ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ.

ಗೋವಾ ಮತ್ತು ಬೆಂಗಳೂರಿನ ಇಡಿ ಅಧಿಕಾರಿಗಳ ಜಂಟಿ ತಂಡವು ಈ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಸ್ಥಳದಲ್ಲಿ 10ಕ್ಕೂ ಹೆಚ್ಚು ಅರೆಸೇನಾ ಪಡೆ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ವೈ. ಮಂಜುನಾಥ್ ಅವರು ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಬೆಳಗಾವಿ ವಲಯದ ಪ್ರಮುಖ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಜುನಾಥ್ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳು, ಆಸ್ತಿ ಪಾಸ್ತಿ ವಿವರ ಹಾಗೂ ಬ್ಯಾಂಕ್ ಖಾತೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರನಾಗಿರುವ ಮಂಜುನಾಥ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು, ಬಾರ್ ಅಂಡ್ ರೆಸ್ಟೋರೆಂಟ್‍ಗಳು ಸೇರಿದಂತೆ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದಾಳಿ ವೇಳೆ ಸಿಕ್ಕಿತ್ತು ಸುಳಿವು:

ಬೆಳಗಾವಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಸಮಯದಲ್ಲಿ ಅಧಿಕಾರಿ ವೈ. ಮಂಜುನಾಥ್ ಮನೆಯಲ್ಲಿ ಇರಲಿಲ್ಲ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ಇವರ ಬಿಜಿನೆಸ್ ಪಾಲುದಾರರು ಹಾಗೂ ಗೆಳೆಯರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಸಿಕ್ಕ ಮಹತ್ವದ ದಾಖಲೆಗಳಲ್ಲಿ ವೈ. ಮಂಜುನಾಥ್ ಅವರ ಹೆಸರು ತಳಕು ಹಾಕಿಕೊಂಡಿತ್ತು. ಈ ಆಧಾರದ ಮೇಲೆಯೇ ಇಡಿ ಈಗ ಮಂಜುನಾಥ್ ಮತ್ತು ಅವರ ಆಪ್ತರನ್ನು ಗುರಿಯಾಗಿಸಿ ಸಾಕ್ಷ್ಯ ಸಂಗ್ರಹಕ್ಕೆ ಇಳಿದಿದೆ. ಪ್ರಸ್ತುತ 10 ಹೆಚ್ಚು ಅರೆಸೇನಾ ಪಡೆ ಯೋಧರ ಕಾವಲಿನಲ್ಲಿ ತಪಾಸಣೆ ಮುಂದುವರಿದಿದೆ.

ಇತ್ತೀಚೆಗೆ ಮಂಜುನಾಥ್ ಅವರ ವ್ಯವಹಾರದ ಪಾಲುದಾರರು ಮತ್ತು ಸ್ನೇಹಿತರ ಮೇಲೆ ನಡೆಸಿದ ದಾಳಿಯಲ್ಲಿ ದೊರೆತ ಮಹತ್ವದ ದಾಖಲೆಗಳಲ್ಲಿ ಮಂಜುನಾಥ್ ಅವರ ಹೆಸರು ಕೇಳಿಬಂದಿತ್ತು. ಈ ಆಧಾರದ ಮೇಲೆ ಇದೀಗ ಇಡಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.ಈ ಕುರಿತಂತೆ ತನಿಖಾ ಸಂಸ್ಥೆಗಳು ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ದಾಳಿಯ ನಂತರ ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular