HomeKarnatakaJOB ALERT : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

JOB ALERT : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ :   ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರಿತವಾಗಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಜುಲೈ 04 ರಂದು ಬೆಳಿಗ್ಗೆ 10:30 ಗಂಟೆಯಿಂದ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಪಶುವೈದ್ಯಕೀಯ ಅಂಗರಚನಾ ಶಾಸ್ತ್ರ ವಿಭಾಗ, ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಔಷಧ ಮತ್ತು ವಿಷ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ರೋಗ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಿಕಾ ಸಂಕೀರ್ಣ (ಕುಕ್ಕುಟ / ಜಾನುವಾರು, ಉತ್ಪಾದನಾ ನಿರ್ವಹಣಾ ಶಾಸ್ತ್ರ),ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ,ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ೧) ಚಿಕಿತ್ಸಾ ಶಾಸ್ತ್ರ, ೨) ಶಸ್ತ್ರ ಚಿಕಿತ್ಸೆ ಈ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಸಿಎಆರ್ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ಗಳ ಸಂಭಾವನೆ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0182-200872 ಅನ್ನು ಸಂಪರ್ಕಿಸಬಹುದು ಅಥವಾ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.kvafsu.edu.in ಗೆ ಭೇಟಿ ನೀಡಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ: ಡಾ.ಕೆ.ಎಸ್.ನಟರಾಜ್

2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಸಕಲ ಸಿದ್ದತೆ ಮಾಡಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಡಿಹೆಚ್‌ಓ ಡಾ.ನಟರಾಜ್ ಕೆ ಎಸ್ ಮನವಿ ಮಾಡಿದರು.

ಮಂಗಳವಾರ ಮಹಾನಗರಪಾಲಿಕೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿಟಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.

ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ನಗರದ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಸಕ್ರಿಯವಾಗಿ ಸಹಕರಿಸಬೇಕು ಎಂದರು.

ಪೋಲಿಯೋ ಬೂತ್‌ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.ನಗರ ಪ್ರದೇಶಗಳಲ್ಲಿ ಕಾರ್ಯಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜವಾಬ್ದಾರಿ ನಿರ್ವಹಿಸಬೇಕು. ಪಾಲಿಕೆ ವತಿಯಿಂದ ಐಇಸಿ ಚಟುವಟಿಕೆಗಳನ್ನು ಕೈಗೊಂಡು ಸಹಕರಿಸಬೇಕು. ನಗರದ ಮುಖ್ಯ ಭಾಗಗಳಲ್ಲಿ ಪೋಸ್ಟರ್ ಗಳು, ಬ್ಯಾನರ್ ಮತ್ತು ಕಸದ ಗಾಡಿಗಳಲ್ಲಿ ಆಡಿಯೋ ಜಿಂಗಲ್ಸ್ ಹಾಕಬೇಕೆಂದ ಅವರು ಎಲ್ಲರೂ ಕೈಜೋಡಿಸಿ ನಗರದಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.ಆರ್‌ಸಿಹೆಚ್ ಅಧಿಕಾರಿ ಡಾ.ಮಲ್ಲಪ್ಪ ಓ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬAದಿತ್ತು. ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.

ನಗರದಲ್ಲಿ 69283 ಮನೆಗಳಿಂದ 21873 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. 05 ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 115 ಬೂತ್‌ಗಳು ಅಂದು ಕಾರ್ಯ ನಿರ್ವಹಿಸಲಿವೆ. 464 ಲಸಿಕಾ ಕಾರ್ಯಕರ್ತರಿದ್ದು, ಬೂತ್‌ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29, 30 ಮತ್ತು ಜುಲೈ 1 ರಂದು ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದರು.ಸಭೆಯಲ್ಲಿ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ಶಸ್ತçಚಿಕಿತ್ಸಕರಾದ ಡಾ.ಗೀತಾ, ಪಾಲಿಕೆ ಪರಿಸರ ಅಭಿಯಂತರರಾದ ಪ್ರಭಾಕರ್, ಡಾ.ನಾರಾಯಣ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಅಧಿಕಾರಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular