HomeEntertainmentಅಭಯ್ ವೀರ್ ಹುಟ್ಟುಹಬ್ಬಕ್ಕೆ ‘ಡೆಡ್ಲಿ ಕಿಲ್ಲರ್’ ಚಿತ್ರತಂಡದಿಂದ ಭರ್ಜರಿ ಗಿಫ್ಟ್: ಗಮನ ಸೆಳೆದ ಹೊಸ ಪೋಸ್ಟರ್

ಅಭಯ್ ವೀರ್ ಹುಟ್ಟುಹಬ್ಬಕ್ಕೆ ‘ಡೆಡ್ಲಿ ಕಿಲ್ಲರ್’ ಚಿತ್ರತಂಡದಿಂದ ಭರ್ಜರಿ ಗಿಫ್ಟ್: ಗಮನ ಸೆಳೆದ ಹೊಸ ಪೋಸ್ಟರ್

ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟ ಅಭಯ್ ವೀರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ಡೆಡ್ಲಿ ಕಿಲ್ಲರ್’ ತಂಡದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ನಟನ ಜನ್ಮದಿನದ ವಿಶೇಷವಾಗಿ ಚಿತ್ರತಂಡ ಸಿನಿಮಾದ ಹೊಚ್ಚಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ.

ಕನ್ನಡ ಚಿತ್ರರಂಗದ ಪ್ರಸಿದ್ಧ ಸಾಹಸ ನಿರ್ದೇಶಕರಾದ ಡಾ. ತ್ರಿಲ್ಲರ್ ಮಂಜು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೀರ್ತಿ ಸಿಲ್ವರ್ ಸ್ಕ್ರೀನ್ಸ್ ಮತ್ತು ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಆರ್ ತಂಬ್ರಳ್ಳಿಮಠ್ ಈ ಆ್ಯಕ್ಷನ್ ಪ್ರಧಾನ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ನಾಯಕನಾಗಿ ಅಭಯ್ ವೀರ್ ಕಾಣಿಸಿಕೊಂಡರೆ, ಅವರಿಗೆ ಜೋಡಿಯಾಗಿ ನಿವಿಕ್ಷಾ ಅಭಿನಯಿಸುತ್ತಿದ್ದಾರೆ.

ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳಿರಲಿದ್ದು, ಸ್ವತಃ ಡಾ. ತ್ರಿಲ್ಲರ್ ಮಂಜು ಅವರೇ ಸ್ಟಂಟ್ಸ್ ವಿನ್ಯಾಸಗೊಳಿಸುತ್ತಿದ್ದಾರೆ. ಜೊತೆಗೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಲೋಕೇಂದ್ರ ಸೂರ್ಯ ಹಾಗೂ ಸುನಿಲ್ ಭಾಲ್ದರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದ್ದು, ದೀಪು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಪೋಸ್ಟರ್ ಚಿತ್ರದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular