HomeLatest Newsರೈತರ ಹಿತಕಾಯುವ ವಿಚಾರದಲ್ಲಿ ಎಂದಿಗೂ ರಾಜಿಯಾದವನಲ್ಲ: ತುಂಗಾಭದ್ರಾ ಡ್ಯಾಂ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಬಗ್ಗೆ...

ರೈತರ ಹಿತಕಾಯುವ ವಿಚಾರದಲ್ಲಿ ಎಂದಿಗೂ ರಾಜಿಯಾದವನಲ್ಲ: ತುಂಗಾಭದ್ರಾ ಡ್ಯಾಂ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಬಗ್ಗೆ ಸಿದ್ಧರಾಮಯ್ಯ

ಬೆಂಗಳೂರು: ತುಂಗಾಭದ್ರಾ ಡ್ಯಾಂಗೆ ಹೊಸ ಗೇಟ್‌ ಗಳ ಅಳವಡಿಕೆ ಯಶಸ್ವಿಯಾಗಿ ಮುಗಿದು ಉದ್ಘಾಟನೆಗೊಳ್ಳುತ್ತಿರುವುದು ನನ್ನಲ್ಲಿ ಸಾರ್ಥಕಭಾವ ಮೂಡಿಸಿದೆ. ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ ತಿಂಗಳಿನಲ್ಲಿ ನೀರಿನ ರಭಸಕ್ಕೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋದದ್ದು ತುಂಗಭದ್ರಾ ಜಲಾನಯನ ಪ್ರದೇಶದ ರೈತರ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿತ್ತು. ರೈತರ ಈ ಆತಂಕವನ್ನು ಅರ್ಥೈಸಿಕೊಂಡು, ತತ್‌ ಕ್ಷಣದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿ, ಆದಷ್ಟು ಶೀಘ್ರ ಗೇಟ್‌ ಅಳವಡಿಕೆ ಮಾಡಿ ನೀರು ಪೋಲಾಗುವುದನ್ನು ತಡೆಯುವಂತೆ ಸೂಚಿಸಿದ್ದೆ. ಕೇವಲ 6 ದಿನಗಳ ಒಳಗೆ ಹೊಸ ಗೇಟ್‌ ಅಳವಡಿಕೆ ಮಾಡುವ ಮೂಲಕ ಜಲಾಶಯದ ನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಅನ್ನದಾತರ ಆತಂಕವನ್ನು ನಿವಾರಣೆ ಮಾಡಿದ್ದೆವು ಎಂದು ತಿಳಿಸಿದ್ದಾರೆ.

ಆದರೆ ಇದು ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದ್ದುದ್ದರಿಂದಲೇ ತಜ್ಞರ ಸಮಿತಿಯ ಮೂಲಕ ಜಲಾಶಯದ ಉಳಿದೆಲ್ಲಾ ಗೇಟ್‌ ಗಳ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ, ಅವರಿಂದ ವರದಿ ಪಡೆದಿದ್ದೆವು. ಸುಮಾರು 70 ವರ್ಷಗಳಷ್ಟು ಹಳೆಯದಾಗಿರುವ ಜಲಾಶಯದ ಗೇಟ್‌ ಗಳನ್ನು ಬದಲಾವಣೆ ಮಾಡುವುದು ಉತ್ತಮ ಎಂಬ ಅಭಿಪ್ರಾಯ ತಜ್ಞರ ವರದಿಯಲ್ಲಿ ಬಂದಿತ್ತು. ರೈತರ ಹಿತಕಾಯುವ ವಿಚಾರದಲ್ಲಿ ನನ್ನ ಇಡೀ ರಾಜಕೀಯ ಬದುಕಿನಲ್ಲಿ ರಾಜಿಯಾದವನಲ್ಲ, ವರದಿ ನನ್ನ ಗಮನಕ್ಕೆ ಬಂದ ತಕ್ಷಣವೇ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಹೊಸ ಗೇಟ್‌ ಅಳವಡಿಕೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 51 ಕೋಟಿ ರೂ. ವೆಚ್ಚದ ಹೊಸ ಗೇಟ್‌ ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡು, ನಾಳೆ ಉದ್ಘಾಟನೆಗೊಳ್ಳುತ್ತಿರುವುದು ಅತ್ಯಂತ ಸಂತಸದ ವಿಚಾರ. ಅತ್ಯಂತ ಕಡಿಮೆ ಅವಧಿಯಲ್ಲಿ ಗೇಟ್‌ ಗಳ ಅಳವಡಿಕೆ ಕಾರ್ಯ ಆರಂಭಿಸಿ, ಈ ವರ್ಷದ ಮಳೆಗಾಲದಲ್ಲಿ ಜಲಾಶಯದ ನೀರಿನ ಸಂಗ್ರಹಣೆಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಕಾಮಗಾರಿ ಪೂರ್ಣಗೊಳಿಸಿರುವ ನೀರಾವರಿ ಇಲಾಖೆಯ ಅಧಿಕಾರಿಗಳಿಗೂ, ಸಿಬ್ಬಂದಿಗಳಿಗೂ, ಕಾಮಗಾರಿ ನಡೆಸಿದ ಕಂಪೆನಿಗೂ, ಎಲ್ಲ ತಂತ್ರಜ್ಞರಿಗೂ ಹಾಗೂ ಸರ್ಕಾರದ ಸಚಿವರುಗಳಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಹೊಸ ಗೇಟ್‌ ಗಳ ಅಳವಡಿಕೆ ಯಶಸ್ವಿಯಾಗಿ ಮುಗಿದು ಉದ್ಘಾಟನೆಗೊಳ್ಳುತ್ತಿರುವುದು ನನ್ನಲ್ಲಿ ಸಾರ್ಥಕಭಾವ ಮೂಡಿಸಿದೆ. ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular