HomeKarnatakaಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: ಸೆ. 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: ಸೆ. 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ಆಗುಂಬೆ ಘಾಟಿಯಲ್ಲಿ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಮಲ್ಪೆ -ತೀರ್ಥಹಳ್ಳಿ ಸಂಪರ್ಕಿಸುವ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಬಾರಿ ವಾಹನಗಳ ಸಂಚಾರದಿಂದ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗುವ ಸಂಭವ ಇರುವದರಿಂದ ಸಾರ್ವಜನಿಕರ ಇದ್ದ ದೃಷ್ಟಿಯಿಂದ ಕೇಂದ್ರ ಮೋಟಾರ್ ವಾಹನ ಕಾಯ್ದೆ ಹಾಗೂ ಕರ್ನಾಟಕ ಮೋಟಾರ್ ವಾಹನಗಳ ನಿಯಮಾವಳಿಯ ಅನ್ವಯ ರಾಷ್ಟ್ರೀಯ ಹೆದ್ದಾರಿ 169ಎ  ಆಗುಂಬೆ ಘಾಟಿಯ ಮೂಲಕ ಕೇವಲ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

ಇದರಿಂದ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ –ನಗರ- ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ, ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು- ಮಾಗುಂಡಿ -ಕಳಸ –ಕುದುರೆಮುಖ- ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ಎನ್.ಆರ್.ಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ -ಜಯಪುರ -ಬಾಳೆಹೊಳೆ -ಕಳಸ -ಕುದುರೆಮುಖ –ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular