HomeKarnatakaBREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ ಅಪಘಾತ ; ಸ್ಥಳದಲ್ಲೇ ನಾಲ್ವರು ದುರ್ಮರಣ

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ ಅಪಘಾತ ; ಸ್ಥಳದಲ್ಲೇ ನಾಲ್ವರು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಾರುತಿ ಓಮ್ನಿ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಾರುತಿ ಓಮ್ನಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಮಂತ್ರಾಲಯಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕೆಂಚಮ್ಮ ಬಾಳೆಕಾಯಿ (35), ಅಮೃತ ಕೋಟ್ಯಾಳ್ (25) ಮತ್ತು ರಮೇಶ್ ಬಳ್ಳಾರಿ (45) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇನ್ನೂ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular