HomeKarnatakaಸಿಎಂ, ಸಚಿವರು ಬದಲಾದ್ರೂ ಹಣೆಬರಹ ಬದಲಾಗದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ…! ನಮ್ಮ ಕ್ಲಿನಿಕ್ ಸಿಬ್ಬಂದಿ ವೇತನ...

ಸಿಎಂ, ಸಚಿವರು ಬದಲಾದ್ರೂ ಹಣೆಬರಹ ಬದಲಾಗದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ…! ನಮ್ಮ ಕ್ಲಿನಿಕ್ ಸಿಬ್ಬಂದಿ ವೇತನ ವಿಳಂಬಕ್ಕೆ ಆರ್. ಅಶೋಕ್ ಆಕ್ರೋಶ

ಬೆಂಗಳೂರು: ನಮ್ಮ ಕ್ಲಿನಿಕ್ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ನೀಡದಿರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ಸರ್ಕಾರ ಬದಲಾದರೂ, ಆರೋಗ್ಯ ಸಚಿವರು ಬದಲಾದರೂ, ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಲಿಲ್ಲ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬದಲಾದರು. ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಲಿಲ್ಲ. ಇಂದು ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

35,196 ಹುದ್ದೆಗಳು ಖಾಲಿ!

ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ. ಸರ್ಕಾರಿ ಆಸ್ಪತ್ರೆಗಳು ಕೇವಲ ಹೆಸರಿಗಷ್ಟೇ ಉಳಿದಿದ್ದು, ಸಮಸ್ಯೆಗಳ ಆಗರಗಳಾಗಿವೆ. ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳುವವರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಠ ಪ್ಯಾರಾಸಿಟಮಾಲ್ ಮಾತ್ರೆಗಳೂ ಸಿಗದೆ ಬಡ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನಮ್ಮ ಕ್ಲಿನಿಕ್’ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನವೇ ಇಲ್ಲ

ಬಡವರು ಹಾಗೂ ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರಂಭವಾಗಿದ್ದ ‘ನಮ್ಮ ಕ್ಲಿನಿಕ್’ ಯೋಜನೆಗೂ ಕಾಂಗ್ರೆಸ್ ಸರ್ಕಾರ ಗರ ಬಡಿದಿದೆ. ಹಗಲಿರುಳು ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನವನ್ನೇ ನೀಡಿಲ್ಲ. ದುಡಿಯುವ ಕೈಗಳಿಗೆ ಸಂಬಳ ಕೊಡಲೂ ಸಾಧ್ಯವಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಾದರೂ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ತಕ್ಷಣವೇ 35,196 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ. ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಿ. ಇಲ್ಲದಿದ್ದರೆ ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular