HomeKarnatakaBREAKING: ಬಿ.ಕಾಂ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

BREAKING: ಬಿ.ಕಾಂ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

ಕಾರವಾರ: ಬಿ.ಕಾಂ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ.

ಅಭಿರಾಮ್ ವೆಂಕಟ್ರಮಣ ಹೆಗಡೆ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸಿದ್ದಾಪುರ ತಾಲೂಕಿನ ಕಾನಸೂರಿನ ಕಲಕಟ್ಟೆಯ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಕೊರಳೊಡ್ದಿದ್ದಾನೆ. ಅಭಿರಾಮ್, ಉಡುಪಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ. ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್ ನೋಟ್ ನಲ್ಲಿ ಈ ಬಾರಿ ಪರೀಕ್ಷೆಯಲ್ಲಿ ನಾನು ಮೂರು ವಿಷಯದಲ್ಲಿ ಫೇಲ್ ಆಗುವ ಸಾಧ್ಯತೆ ಇದ್ದು, ಇದರಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ. ನನ್ನ ಭವಿಷ್ಯ ಮುಗಿದು ಹೋಗಿದೆ. ಇನ್ನು ನಾನು ಬದುಕಿದ್ದು ಪ್ರಯೋಜನವಿಲ್ಲ ಎಂದು ಬರೆದಿಟ್ಟಿರುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದಷ್ಟೇ ತಂದೆಯೊಂದಿಗೆ ಉಡುಪಿಗೆ ಹೋಗಿ ಕಾಲೇಜಿನಲ್ಲಿ ಅಡ್ಮಿಷನ್ ಮಾಡಿಬಂದಿದ್ದ. ಪರೀಕ್ಷೆಯಲ್ಲಿ ಫೇಲಾಗಬಹುದು ಎಂಬ ಆತಂಕದಲ್ಲೇ ರಿಸಲ್ಟ್ ಬರುವ ಮುನ್ನವೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular