HomeKarnataka'ಬೇಕರಿ ಬ್ಯುಸಿನೆಸ್' ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ ; ಶಿವಮೊಗ್ಗದಲ್ಲಿ ವಿಶೇಷ ತರಬೇತಿ

‘ಬೇಕರಿ ಬ್ಯುಸಿನೆಸ್’ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ ; ಶಿವಮೊಗ್ಗದಲ್ಲಿ ವಿಶೇಷ ತರಬೇತಿ

ಶಿವಮೊಗ್ಗ; ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಜು. 06 ರಿಂದ ಆ.04 ರ ವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್‌ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟಿçà ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಜು.04 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ ಎಂದು ಕಾಲೇಜಿನ ಪ್ರೊಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸುವುದು.

ಪ್ರಥಮ ವರ್ಷದ ದೃಶ್ಯಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ :   ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ದತಿಯ ದೃಶ್ಯ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ./ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಈ ಪದವಿಯಲ್ಲಿ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಮೂಲಕ ದಿ:04/07/2026 ರೊಳಗಾಗಿ ದಂಡಶುಲ್ಕದೊಂದಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನವನ್ನು ದಿನಾಂಕ: 06/07/2026 ರಂದು ನಡೆಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವ್ಯಕ್ತಿಯೊಂದಿಗೆ ಇಲಾಖೆ ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ಇಲಾಖೆಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular