HomeKarnatakaBIG NEWS : ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಂದು ಕುಖ್ಯಾತಿ ; ರಸ್ತೆ ಅಪಘಾತಗಳಲ್ಲಿ ದೇಶದಲ್ಲೇ...

BIG NEWS : ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಂದು ಕುಖ್ಯಾತಿ ; ರಸ್ತೆ ಅಪಘಾತಗಳಲ್ಲಿ ದೇಶದಲ್ಲೇ ನಂ.1.!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ರಸ್ತೆ ಸುರಕ್ಷತೆ ವಿಚಾರದಲ್ಲಿ ಆತಂಕಕಾರಿ ದಾಖಲೆ ಬರೆದಿದ್ದು, ರಸ್ತೆ ಅಪಘಾತಗಳ ಪ್ರಮಾಣದಲ್ಲಿ ದೇಶದ ಪ್ರಮುಖ ನಗರಗಳ ಪೈಕಿ ಅಗ್ರಸ್ಥಾನದಲ್ಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ವರದಿ ಪ್ರಕಾರ, ಅತಿ ವೇಗದ ಚಾಲನೆ ಹಾಗೂ ನೇರ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳ ಸಂಖ್ಯೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ.

ಹೌದು.  ದೇಶದಲ್ಲೇ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ರಾಜ್ಯವಾರು ರಸ್ತೆ ಅಪಘಾತಗಳ ಪಟ್ಟಿಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಈ ಅಂಕಿ-ಅಂಶಗಳು ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ಬೆಂಗಳೂರಲ್ಲಿ 4,161 ಅಪಘಾತಗಳು ಸಂಭವಿಸಿದ್ದು, ಈ ದುರ್ಘಟನೆಗಳಲ್ಲಿ 766 ಮಂದಿ ಮೃತಪಟ್ಟಿದ್ದು, 3,463 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದು, ಅತಿವೇಗದ ಚಾಲನೆ, ಸಂಚಾರ ನಿಯಮ ಉಲ್ಲಂಘನೆ, ರಸ್ತೆ ಮೂಲಸೌಕರ್ಯದ ಸಮಸ್ಯೆಗಳು ಹಾಗೂ ಸಂಚಾರ ದಟ್ಟಣೆ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ರಾಜ್ಯದ ಹಲವು ರಾಷ್ಟ್ರೀಯ ಹೆದ್ದಾರಿಗಳಲ್ಲೂ ಅಪಘಾತಗಳು ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ನೂರಾರು ಅಪಘಾತ ‘ಬ್ಲ್ಯಾಕ್ ಸ್ಪಾಟ್’ಗಳನ್ನು ಗುರುತಿಸಲಾಗಿದೆ.ಕಳೆದ ವರ್ಷಗಳ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಸಾವಿರಾರು ರಸ್ತೆ ಅಪಘಾತಗಳು ಸಂಭವಿಸಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರವೇ ಅಪಘಾತಗಳಿಂದ ಅತಿಹೆಚ್ಚು ಸಾವಿನ ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರದ ಮಾಹಿತಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಜ್ಞರ ಅಭಿಪ್ರಾಯದಂತೆ, ಅತಿವೇಗ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಬಳಸದಿರುವುದು, ನಿರ್ಲಕ್ಷ್ಯ ಚಾಲನೆ ಮತ್ತು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ಅಪಘಾತಗಳ ಪ್ರಮುಖ ಕಾರಣಗಳಾಗಿವೆ. ಅಪಘಾತಗಳನ್ನು ತಡೆಗಟ್ಟಲು ಕಾನೂನು ಜಾರಿ, ಜಾಗೃತಿ ಅಭಿಯಾನಗಳು ಹಾಗೂ ರಸ್ತೆ ಮೂಲಸೌಕರ್ಯ ಸುಧಾರಣೆ ಅಗತ್ಯವಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ರಸ್ತೆಗಳು ನೇರವಾಗಿರುವ ಕಾರಣ ವಾಹನ ಸವಾರರು ಅತಿ ವೇಗದಲ್ಲಿ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಗರದಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಶೇ.90ರಷ್ಟು ಸಾವು-ನೋವುಗಳು ಅತಿ ವೇಗದ ಚಾಲನೆಯಿಂದಲೇ ಸಂಭವಿಸಿವೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಹಾಗೂ ಪಾದಚಾರಿಗಳು ರಸ್ತೆ ದಾಟುವ ವೇಳೆ ಸಂಚಾರ ನಿಯಮಗಳನ್ನು ಪಾಲಿಸದಿರುವುದು ಕೂಡ ಸಾವಿನ ಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣಗಳಾಗಿವೆ. ಇನ್ನೂ ಆಶ್ಚರ್ಯದ ಸಂಗತಿಯೆಂದರೆ, ಮಳೆ ಅಥವಾ ಪ್ರತಿಕೂಲ ಹವಾಮಾನಕ್ಕಿಂತ ಸ್ಪಷ್ಟ ಹವಾಮಾನ (Clear Weather) ಇರುವ ಸಂದರ್ಭದಲ್ಲೇ ಹೆಚ್ಚು ಅಪಘಾತಗಳು ದಾಖಲಾಗಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular