ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದ ಹೋಮ್‌ಸ್ಟೇ ಒಂದರಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಪ್ರೇಯಸಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಂದಿಗಿರಿಧಾಮ ಸಮೀಪದ ಹೋಮ್‌ಸ್ಟೇಯೊಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ಪ್ರಕರಣ ಸಂಚಲನ ಮೂಡಿಸಿದೆ.ಮೃತ ಯುವತಿಯನ್ನು ಸುರಭಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಆಕೆಯ ಪ್ರಿಯಕರ ಸಂಜಿತ್ ಅಲಿ ಯುವತಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಸಂಜಿತ್ ಅಲಿಯನ್ನು ಹೆಚ್ಚಿನ ಚಿಕಿತ್ಸೆಗೆ ಕೇರಳದ ಕೋಝಿಕೋಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿಯ ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆ ಬಗ್ಗೆ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

