HomeKarnatakaಹಾವೇರಿಯಲ್ಲಿ ಕಾರ ಹುಣ್ಣಿಮೆಯಂದೇ ಹರಿದ ರಕ್ತ: ಹೋರಿ ಓಡಿಸುವ ವೇಳೆ 8 ಮಂದಿ ಮೇಲೆ ದಾಳಿ

ಹಾವೇರಿಯಲ್ಲಿ ಕಾರ ಹುಣ್ಣಿಮೆಯಂದೇ ಹರಿದ ರಕ್ತ: ಹೋರಿ ಓಡಿಸುವ ವೇಳೆ 8 ಮಂದಿ ಮೇಲೆ ದಾಳಿ

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಹಬ್ಬದ ಅಂಗವಾಗಿ ಸಂಪ್ರದಾಯದಂತೆ ಹೋರಿಗಳನ್ನು ಓಡಿಸುವ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಕಾರಣಕ್ಕೆ ಎರಡು ಕೋಮಿನವರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ಕೈ ಕಡಿಯಲಾಗಿದೆ.

ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಪ್ರತಿ ವರ್ಷದಂತೆ ಸೋಮವಾರ ಕಾರ ಹುಣ್ಣಿಮೆಯಂದು ಹೋರಿ ಓಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೈತರು ತಮ್ಮ ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಮಸೀದಿ ಬಳಿ ಪಟಾಕಿ ಸಿಡಿಸಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭಾಷಾ ಸಾಬ್ ಮಸೀದಿ ಬಳಿ ಏಕೆ ಪಟಾಕಿ ಸಿಡಿಸಿದ್ದೀರಿ ಎಂದು ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಹೋರಿ ಹಿಂದೆ ಬಂದಿದ್ದ ಲೋಹಿತ್ ಎಂಬುವರನ್ನು ಅನ್ಯಕೋಮಿನವರು ಥಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಯುವಕರ ಗುಂಪು ಗಲಾಟೆ ಮಾಡಿದೆ. ಈ ಗಲಾಟೆಯಲ್ಲಿ ಭಾಷಾ ಸಾಬ್ ಮತ್ತು ಅತನ ಪುತ್ರ ಖಾಜಾ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ, ಶಿವರಾಜು, ನಾಗಪ್ಪ, ಮಲ್ಲಪ್ಪ, ನಿಂಗರಾಜ, ಜಯಪ್ಪ, ಲೋಹಿತ್, ಭಾಷಾ ಸಾಬ್ ಇತರರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವರಾಜು, ಜಯಪ್ಪ, ಲೋಹಿತ್ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಕೈ ಕಡಿಯಲಾಗಿದ್ದು, ಉಳಿದವರು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರೇಗಲ್ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗ್ರಾಮಕ್ಕೆ ಹಾನಗಲ್ ಠಾಣೆ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular