HomeKarnatakaBIG NEWS: ಅಡ್ಡಮತದಾನ ಆರೋಪ: ಧರ್ಮಸ್ಥಳದಲ್ಲಿಯೂ ಆಣೆ-ಪ್ರಮಾಣ ಮಾಡಿದ ಶಾಸಕ ಹೆಚ್.ಕೆ.ಸುರೇಶ್

BIG NEWS: ಅಡ್ಡಮತದಾನ ಆರೋಪ: ಧರ್ಮಸ್ಥಳದಲ್ಲಿಯೂ ಆಣೆ-ಪ್ರಮಾಣ ಮಾಡಿದ ಶಾಸಕ ಹೆಚ್.ಕೆ.ಸುರೇಶ್

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.

ಇಂದು ಬೆಳಿಗ್ಗೆ ಬೇಲೂರಿನ ಚನ್ನಕೇಶ್ವರ ದೇವಸ್ಥಾನದಲ್ಲಿ ಆನೆ-ಪ್ರಮಾಣ ಮಾಡಿ ತಾನು ಅಡ್ಡಮತದಾನ ಮಾಡಿಲ್ಲ, ಪಕ್ಷಕ್ಕೆ ಯಾವುದೇ ದ್ರೋಹ ಬಗೆದಿಲ್ಲ ಎಂದು ದೇವಸ್ಥಾನದ ಕರಿಕಲ್ಲಿನ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದರು. ಇದರ ಬೆನ್ನಲ್ಲೇ ಧರ್ಮಸ್ಥಳಕ್ಕೆ ತೆರಳಿದ ಶಾಸಕರು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪ್ರಮಾಣ ಮಾಡಿದ್ದಾರೆ.

ಶಾಸಕ ಹೆಚ್.ಕೆ.ಸುರೇಶ್ ಅಡ್ಡಮತದಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ತಮ್ಮ ಮೇಲಿನ ಆರೋಪಗಳಿಗೆ ಆಣೆ-ಪ್ರಮಾಣದ ಮೂಲಕ ಉತ್ತರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಲೂರಿನ ಚನ್ನಕೇಶವ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಶಾಸಕ
ಹಾಸನ: ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಬೇಲೂರು ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡುವ ಮೂಲಕ ತಾವೊಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಬೇಲೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಕರಿಕಲ್ಲಿನ ಮೇಲೆ ಕೈಯಿಟ್ಟು ಶಾಸಕ ಸುರೇಶ್ ಆಣೆ ಪ್ರಮಾಣ ಮಾಡಿದ್ದಾರೆ.

ಶಾಸಕ ಹೆಚ್.ಕೆ. ಸುರೇಶ್ ಇಂದು ಬೆಳಿಗ್ಗೆ ಬೆಂಬಲಿಗರೊಂದಿಗೆ ಚನ್ನಕೇಶವಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಚನ್ನಕೇಶವಸ್ವಾಮಿ, ಸೌಮ್ಯನಾಯಕಿ ಹಾಗೂ ರಂಗನಾಯಕಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚನ್ನಕೇಶವಸ್ವಾಮಿಯ ಪಾದಮುಟ್ಟಿ ಭಕ್ತಿಯಿಂದ ನಮಸ್ಕರಿಸಿದರು. ‘ಪೂರ್ವಜನ್ಮದ ಪುಣ್ಯದಿಂದ ನನಗೆ ಭಗವಂತನ ಬಲಭಾಗದಲ್ಲಿ ವಾಸಮಾಡುವ ಹಾಗೂ ಕ್ಷೇತ್ರದ ಜನರ ಸೇವೆ ಮಾಡುವ ಅಪೂರ್ವ ಅವಕಾಶ ಸಿಕ್ಕಿದೆ’ ಎಂದು ಅವರು ಹೇಳಿದರು.

ದೇವಾಲಯದ ಆವರಣದ ಎದುರಿನ ಬಲಿಕಲ್ಲು (ಕರಿಕಲ್ಲು) ಮುಟ್ಟಿ ಪ್ರಮಾಣ ಮಾಡಿದ ಶಾಸಕರು, ‘ಈ ಕರಿಕಲ್ಲೇ ಸಾಕ್ಷಿ, ನಾನು ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಅಡ್ಡಮತದಾನ ಮಾಡಿಲ್ಲ’ ಎಂದು ಮೂರು ಬಾರಿ ಗಟ್ಟಿಯಾಗಿ ಉಚ್ಚರಿಸಿದರು. ಅಷ್ಟೇ ಅಲ್ಲದೆ, ‘ನಾನು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದ್ರೋಹ ಮಾಡಿಲ್ಲ’ ಎಂದು ಮೂರು ಬಾರಿ ಪುನರುಚ್ಚರಿಸಿದರು.

ಆಣೆ ಪ್ರಮಾಣದ ಬಳಿಕ ಮಾತನಾಡಿದ ಶಾಸಕ ಸುರೇಶ್, ನನ್ನ ವಿರುದ್ಧ ಕೇಳಿಬರುತ್ತಿರುವ ಈ ಅಡ್ಡಮತದಾನದ ಅಪಪ್ರಚಾರ ಈ ಕ್ಷೇತ್ರದ ವಿರುದ್ಧ ನಡೆದಿರುವ ದೊಡ್ಡ ಪಿತೂರಿ ಮತ್ತು ಷಡ್ಯಂತ್ರವಾಗಿದೆ. ನಮ್ಮ ಕ್ಷೇತ್ರಕ್ಕೆ ಖುದ್ದಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಬಂದು ಪ್ರಚಾರ ಮಾಡಿದ್ದರು. ಅಂತಹ ನಾಯಕರಿಗೆ ಹಾಗೂ ಪಕ್ಷಕ್ಕೆ ನಾನು ಅನ್ಯಾಯ ಮಾಡಿದರೆ ಭಗವಂತ ನನ್ನನ್ನು ಎಂದಿಗೂ ಕ್ಷಮಿಸುವುದಿಲ್ಲ. ನಮ್ಮ ಪಕ್ಷದ ವಿರೋಧ ಪಕ್ಷದ ನಾಯಕರು ಸೂಚಿಸಿದಂತೆ ನಾನು ನಿಖರವಾಗಿ ನನ್ನ ಮತ ಚಲಾವಣೆ ಮಾಡಿದ್ದೇನೆ. ಇದಕ್ಕೆ ಆ ಪರಮಾತ್ಮನೇ ಸಾಕ್ಷಿ ಎಂದು ಸ್ಪಷ್ಟಪಡಿಸಿದರು.

ನನ್ನನ್ನು ಹಣದಿಂದಾಗಲಿ ಅಥವಾ ದೌರ್ಜನ್ಯದಿಂದಾಗಲಿ ಯಾರೂ ಖರೀದಿಸಲು ಸಾಧ್ಯವಿಲ್ಲ. ನನ್ನನ್ನು ಕೇವಲ ಜನರ ಪ್ರೀತಿಯಿಂದ ಮಾತ್ರ ಖರೀದಿಸಲು ಸಾಧ್ಯ. ಇಷ್ಟು ಜನರ ಪ್ರೀತಿಯೇ ನನಗೆ ಶ್ರೀರಕ್ಷೆ. ನನ್ನ ವಿರುದ್ಧ ನಡೆದಿರುವ ಈ ಪಿತೂರಿಯ ಹಿಂದಿನ ಷಡ್ಯಂತ್ರವನ್ನು ಆ ಭಗವಂತನೇ ಎಲ್ಲರಿಗೂ ತಿಳಿಸಲಿ ಎಂಬ ಕಾರಣಕ್ಕೆ ನಾನು ಈ ಆಣೆ ಪ್ರಮಾಣ ಮಾಡಿದ್ದೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular