HomeKarnatakaBIG ALERT : ರಾಜ್ಯದ ಜನತೆ ಗಮನಕ್ಕೆ ; ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಭವಿಷ್ಯದಲ್ಲಿ...

BIG ALERT : ರಾಜ್ಯದ ಜನತೆ ಗಮನಕ್ಕೆ ; ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಭವಿಷ್ಯದಲ್ಲಿ ಸರ್ಕಾರಿ ಸೌಲಭ್ಯಕ್ಕೂ ಕತ್ತರಿ ?

ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪ್ರತಿಯೊಬ್ಬರೂ ಖಚಿತಪಡಿಸಿಕೊಳ್ಳಬೇಕು. ಇಲ್ಲವಾದರೆ ಮತದಾನದ ಹಕ್ಕಿನ ಜೊತೆಗೆ ಸರ್ಕಾರಿ ಸೌಲಭ್ಯಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

“ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು” ಎಂದು ಹೇಳಿದ ಡಿ.ಕೆ. ಶಿವಕುಮಾರ್, ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆಯ ಆಧಾರದ ಮೇಲೆ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ. ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಕ್ರಮಗಳು ನಡೆಯುತ್ತಿವೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ
ರಾಜ್ಯ ಚುನಾವಣಾ ಆಯೋಗದ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ. ಈ ಅಭಿಯಾನದಲ್ಲಿ ರಾಜ್ಯದ 5.5 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಳ್ಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಶ್ವತ ನಿವಾಸ ಪ್ರಮಾಣಪತ್ರಕ್ಕೆ ಅವಕಾಶ
ಎಸ್ಐಆರ್ ಪ್ರಕ್ರಿಯೆಗೆ ನೆರವಾಗಲು ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ತೀರ್ಮಾನಿಸಿದೆ. ಈ ಪ್ರಮಾಣಪತ್ರವನ್ನು ನಿವಾಸದ ಸಾಕ್ಷ್ಯವಾಗಿ ಬಳಸಬಹುದು.ನಾಗರಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅಥವಾ ಅಟಲ್ ಜನಸ್ನೇಹಿ ಕೇಂದ್ರ, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

59 ಸಾವಿರಕ್ಕೂ ಹೆಚ್ಚು ಬಿಎಲ್ಒಗಳ ನಿಯೋಜನೆ
ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 59,050 ಬೂತ್ ಮಟ್ಟದ ಅಧಿಕಾರಿಗಳು (BLOs), 7,556 ಮೇಲ್ವಿಚಾರಕರು, 224 ಚುನಾವಣಾ ನೋಂದಣಿ ಅಧಿಕಾರಿಗಳು ಹಾಗೂ 336 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಜೊತೆಗೆ ರಾಜಕೀಯ ಪಕ್ಷಗಳು ನೇಮಿಸಿರುವ 1.1 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಏಜೆಂಟರಿಗೆ ತರಬೇತಿ ನೀಡಲಾಗಿದೆ.

ಹೀಗೆ ನಡೆಯಲಿದೆ ಮಾಹಿತಿ ಸಂಗ್ರಹ
ಜೂನ್ 16, 2026ರ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರ ಮನೆಗೆ ಬಿಎಲ್ಒಗಳು ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ ವಿತರಿಸಲಿದ್ದಾರೆ.
• ಫಾರ್ಮ್ ನೀಡಿದ ಮನೆಗಳಿಗೆ ನೇರಳೆ ಬಣ್ಣದ ಚೌಕಾಕಾರದ ಸ್ಟಿಕ್ಕರ್ ಅಂಟಿಸಲಾಗುತ್ತದೆ.
• ಮನೆ ಬೀಗ ಹಾಕಿದ್ದರೆ ಕೆಂಪು ಬಣ್ಣದ ವೃತ್ತಾಕಾರದ ಸ್ಟಿಕ್ಕರ್ ಅಂಟಿಸಲಾಗುತ್ತದೆ.
• ಅಗತ್ಯವಿದ್ದರೆ ಭರ್ತಿ ಮಾಡಿದ ಫಾರ್ಮ್ ಪಡೆಯಲು ಮೂರು ಬಾರಿ ಭೇಟಿ ನೀಡಲಾಗುತ್ತದೆ.

ದಾಖಲೆಗಳನ್ನು ಸಂಗ್ರಹಿಸುವುದಿಲ್ಲ
ಚುನಾವಣಾ ಆಯೋಗದ ಸ್ಪಷ್ಟೀಕರಣದಂತೆ, ಈ ಹಂತದಲ್ಲಿ ಯಾವುದೇ ದಾಖಲೆಗಳನ್ನು ಸಂಗ್ರಹಿಸಲಾಗುವುದಿಲ್ಲ. ಮತದಾರರು ಫಾರ್ಮ್ ಸ್ವೀಕರಿಸಿ, ಭರ್ತಿ ಮಾಡಿ, ಸಹಿ ಮಾಡಿ ಬಿಎಲ್ಒಗಳಿಗೆ ಹಿಂತಿರುಗಿಸಿದರೆ ಸಾಕು ಎಂದು ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.ಅಲ್ಲದೆ, ಸಂಪೂರ್ಣ ಪ್ರಕ್ರಿಯೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಕಾನೂನುಬದ್ಧವಾಗಿ ನಡೆಯಲಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular