HomeLatest Newsಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು: ನಾಲ್ವರು ಆರೋಪಿಗಳು ಅರೆಸ್ಟ್‌

ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು: ನಾಲ್ವರು ಆರೋಪಿಗಳು ಅರೆಸ್ಟ್‌

ಜೈಪುರ: ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RUHS) ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ಜುನ್ಜುನುವಿನ ಎಸ್ ಕರಣ್ ಕಾಲೇಜಿನ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥ ಕೃಷ್ಣ ಕುಮಾರ್ ಸೈನಿ, ಎಸ್ ಕರಣ್ ಕಾಲೇಜಿನ ರೇಡಿಯಾಲಜಿ ವಿಭಾಗದ ಉಪನ್ಯಾಸಕ ಶಂಕರ್ ಲಾಲ್ ಜಾಟ್, ಪ್ರಭಾ ಮೆಮೋರಿಯಲ್ ಪಿಜಿ ಕಾಲೇಜಿನೊಂದಿಗೆ ಸಂಬಂಧ ಹೊಂದಿರುವ ರಾಮಕೃಷ್ಣ ಮಂಡಿವಾಲ್ ಮತ್ತು ಕಾಲೇಜಿನ ಆಡಳಿತಾಧಿಕಾರಿ ದೇವಕೃಷ್ಣ ಮಂಡಿವಾಲ್ ಬಂಧಿತರು.

ಜೈಪುರದ ಪ್ರಭಾ ದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮೂಹಿಕ ನಕಲಿನ ಬಗ್ಗೆ ಜೂನ್ 27 ರಂದು ಪೊಲೀಸರಿಗೆ ಗುಪ್ತಚರ ಮಾಹಿತಿ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಕಿರಣ್ ತಿಳಿಸಿದ್ದಾರೆ. ಭ್ಯರ್ಥಿಗಳು ಮೊದಲ ವರ್ಷದಲ್ಲಿ ಪಾಸ್‌ ಆಗದೇ ಉಳಿದಿದ್ದರು. ಅವರನ್ನು ಪಾಸ್‌ ಮಾಡಲು, ಆರೋಪಿಗಳು ಜೈಪುರ ಪರೀಕ್ಷಾ ಕೇಂದ್ರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಈ ಘಟನೆ ಬಳಿಕ ಪರೀಕ್ಷೆ ರದ್ದಾಗಿದ್ದು, ವಿದ್ಯಾರ್ಥಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾಲೇಜಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನು ಎಸೆದು ಪ್ರತಿಭಟಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular