ಧಾರವಾಡ : ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿ ದಪ್ಪವಾಗಿದ್ದಾಳೆ ಎಂಬ ಕಾರಣಕ್ಕೆ ಹಾಗೂ ತವರು ಮನೆಯಿಂದ ಚಿನ್ನ ತರುವಂತೆ ಕಿರುಕುಳ ನೀಡುತ್ತಿದ್ದ ಪತಿಯೊಬ್ಬ, ಕೊನೆಗೆ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸವರಾಜ್ ವಡ್ಡರ್ನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಬಸವರಾಜ್ ಜೊತೆ ಆತನ ತಂದೆ, ತಾಯಿ, ಸಹೋದರನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ಪ್ರಿಯಾಂಕ ಕಮಲಾಕರ್ (29) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಬಸವರಾಜ್ ವಡ್ಡರ್ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪತ್ನಿ ದಪ್ಪವಾಗಿದ್ದಾಳೆ ಎಂದು ಅವಮಾನಿಸುತ್ತಿದ್ದ ಆರೋಪಿ, ತವರು ಮನೆಯಿಂದ ಚಿನ್ನ ತರುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಕೊನೆಗೆ ಆರೋಪಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಸವರಾಜ್ ವಡ್ಡರ್ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘಟನೆ ನಡೆದಿದೆ.

