HomeLatest NewsBIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ ;...

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ ; ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಹಾಗೂ ದೂರದರ್ಶನ ಧಾರಾವಾಹಿಗಳ ಚಿತ್ರೀಕರಣ ನಡೆಸುವುದನ್ನು ಶಿಕ್ಷಣ ಇಲಾಖೆಯು ಸಂಪೂರ್ಣವಾಗಿ ನಿಷೇಧಿಸಿದೆ.

ಹೌದು. ಸರ್ಕಾರಿ ಶಾಲೆಗಳ ಆವರಣ ಇನ್ನು ಮುಂದೆ ಚಿತ್ರೀಕರಣಕ್ಕೆ ಲಭ್ಯವಿಲ್ಲ! ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಒಳಗೆ ಮತ್ತು ಆವರಣದಲ್ಲಿ ಸಿನಿಮಾ, ಸೀರಿಯಲ್ ಸೇರಿದಂತೆ ಯಾವುದೇ ರೀತಿಯ ಚಿತ್ರೀಕರಣ ನಡೆಸುವುದನ್ನು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲಿಕಾ ವಾತಾವರಣದ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಿಷೇಧಕ್ಕೆ ಕಾರಣಗಳೇನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಗೌಪ್ಯತೆ: ಶಾಲೆಯಲ್ಲಿನ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಗೌಪ್ಯತೆಯನ್ನು ಕಾಪಾಡುವುದು ಶಾಲಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ.
  • ಶೈಕ್ಷಣಿಕ ಅಡಚಣೆ: ಚಿತ್ರೀಕರಣದಿಂದ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಅಡಚಣೆಯಾಗಿ, ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.
  • ಮಾನಸಿಕ ಆರೋಗ್ಯ: ಚಿತ್ರೀಕರಣದ ಪ್ರಕ್ರಿಯೆಯು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು ಮತ್ತು ಅವರಿಗೆ ಅನಗತ್ಯ ಒತ್ತಡವನ್ನು ಉಂಟುಮಾಡಬಹುದು.
  • ಪೋಷಕರ ಆಕ್ಷೇಪ: ಅನೇಕ ಪೋಷಕರು ತಮ್ಮ ಮಕ್ಕಳ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರಕಟಿಸಲು ಒಪ್ಪಿಗೆ ನೀಡುವುದಿಲ್ಲ ಎಂಬ ಅಂಶವನ್ನು ಇಲಾಖೆ ಪರಿಗಣಿಸಿದೆ.

ಈ ಹಿಂದಿನ ಸುತ್ತೋಲೆಯಂತೆ (ದಿನಾಂಕ: 07-02-2013), ಶಾಲಾ ಮೈದಾನ ಅಥವಾ ಆವರಣವನ್ನು ಯಾವುದೇ ಖಾಸಗಿ ಅಥವಾ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಎಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆಯು ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular