HomeKarnatakaBREAKING : ಮೌಲ್ವಿಗಳಿಗೆ ನಿಂದನೆ ಆರೋಪ ; ಹಿಂದೂಪರ ಕಾರ್ಯಕರ್ತ 'ಪುನೀತ್ ಕೆರೆಹಳ್ಳಿ' ಅರೆಸ್ಟ್.!

BREAKING : ಮೌಲ್ವಿಗಳಿಗೆ ನಿಂದನೆ ಆರೋಪ ; ಹಿಂದೂಪರ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್.!

ಬೆಂಗಳೂರು: ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಕುಮಾರಸ್ವಾಮಿ ಲೇಔಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.   ಮೌಲ್ವಿಗಳಿಗೆ ನಿಂದಿಸಿದ ಆರೋಪದ ಮೇರೆಗೆ ಅಬ್ದುಲ್ ರಜಾಕ್ ಎಂಬುವವರು ದೂರು ನೀಡಿದ್ದರು.ದೂರಿನಲ್ಲಿ, ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಹೇಳಿಕೆಗಳ ಮೂಲಕ ಮೌಲ್ವಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular