HomeKarnatakaBREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್‌ನಲ್ಲಿ ಅರ್ಜಿ ವಜಾ, ಕೆ.ಎಸ್....

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್‌ನಲ್ಲಿ ಅರ್ಜಿ ವಜಾ, ಕೆ.ಎಸ್. ಈಶ್ವರಪ್ಪಗೆ ಸಂಕಷ್ಟ.!

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಲೋಕಾಯುಕ್ತ ದಾಖಲಿಸಿರುವ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡುವಂತೆ ಹಾಗೂ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೌದು.ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಲೋಕಾಯುಕ್ತ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪ್ರಕರಣವನ್ನು ರದ್ದುಪಡಿಸುವುದು ಹಾಗೂ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದರೊಂದಿಗೆ ಲೋಕಾಯುಕ್ತ ತನಿಖೆಗೆ ಇದ್ದ ಕಾನೂನು ಅಡೆತಡೆ ದೂರವಾದಂತಾಗಿದೆ. ನ್ಯಾಯಾಲಯದ ಈ ಆದೇಶದಿಂದ ಈಶ್ವರಪ್ಪ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಲೋಕಾಯುಕ್ತದ ತನಿಖೆಯನ್ನು ಪ್ರಶ್ನಿಸಿ ಹಾಗೂ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಈಶ್ವರಪ್ಪ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೆ, ತನಿಖೆಯ ಭಾಗವಾಗಿ ಬಂಧನದ ಸಾಧ್ಯತೆ ಇರುವುದರಿಂದ ತಮ್ಮನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ, ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಂತದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ಲೋಕಾಯುಕ್ತದ ತನಿಖೆಗೆ ಹಸಿರು ನಿಶಾನೆ ದೊರೆತಿದ್ದು, ಈಶ್ವರಪ್ಪ ಅವರಿಗೆ ಕಾನೂನು ಹೋರಾಟದಲ್ಲಿ ತಾತ್ಕಾಲಿಕ ಹಿನ್ನಡೆಯಾಗಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆಯನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಿದ್ದು, ಅಗತ್ಯವಿದ್ದರೆ ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳುವ ಅವಕಾಶವೂ ಲಭ್ಯವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ರಾಜಕೀಯ ವಲಯದ ಗಮನ ನೆಟ್ಟಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular