HomeKarnatakaBIG NEWS: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

BIG NEWS: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು: “ರಾಜ್ಯದ ಯಾವುದೇ ವಿದ್ಯುತ್ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ಈ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೃಢವಾಗಿ ಘೋಷಿಸಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ಎಲ್ಲಾ ನೌಕರರು ಮತ್ತು ಅಧಿಕಾರಿಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಭರವಸೆ ನೀಡಿದ್ದರು.

ಸರ್ಕಾರದ ಈ ಕಟ್ಟುನಿಟ್ಟಿನ ನಿಲುವಿನ ಬೆನ್ನಲ್ಲೇ, ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್‌ಸಿ (KERC) ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಇಂದೇ ಹಿಂಪಡೆದುಕೊಂಡಿದೆ. ಸರ್ಕಾರದ ಈ ಐತಿಹಾಸಿಕ ನಿರ್ಧಾರ ಮತ್ತು ನೌಕರರ ಹಿತರಕ್ಷಣೆಯನ್ನು ಶ್ಲಾಘಿಸಿ, ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದೇಸಾಯಿ, ಹಿರಿಯ ಉಪಾಧ್ಯಕ್ಷ ರಾಜೋಜಿ ರಾವ್ ಹಾಗೂ ಇತರೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular