HomeKarnatakaರಾಜ್ಯದಲ್ಲಿ ಮಳೆ ಕೊರತೆ ನಡುವೆಯೂ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಗೆ ಮಹತ್ವದ ಕ್ರಮ: ವಿಶೇಷ ತುರ್ತು ಕಾರ್ಯಯೋಜನೆಗೆ...

ರಾಜ್ಯದಲ್ಲಿ ಮಳೆ ಕೊರತೆ ನಡುವೆಯೂ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಗೆ ಮಹತ್ವದ ಕ್ರಮ: ವಿಶೇಷ ತುರ್ತು ಕಾರ್ಯಯೋಜನೆಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂಧನ ಸಚಿವ ಕೆ. ಜೆ. ಜಾರ್ಜ್‌ ಅವರೊಂದಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಅಧಿಕಾರಿಗಳಿಗೆ ಸಲಹೆ – ಸೂಚನೆಗಳನ್ನು ನೀಡಿದರು.

– ಮಳೆ ಕೊರತೆಯಿಂದ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಆಗಬಹುದು, ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ.

– ಎಲ್ ನಿನೊ (El Nino) ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ, ಸಂಗ್ರಹಣೆ ಮತ್ತು ಇತರೆ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

– ಇಂಧನ ಭದ್ರತೆಗಾಗಿ ಸರ್ಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳನ್ನು ಕಾರ್ಯಾರಂಭಗೊಳಿಸಿ, ಸಾಕಷ್ಟು ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು.

– ಸದ್ಯದ ಸ್ಥಿತಿಯಲ್ಲಿ ನವೀಕರಿಸಬಹುದಾದ ಇಂಧನದ ಸಮರ್ಥ ನಿರ್ವಹಣೆಗಾಗಿ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ಗಳು (BESS) ಹಾಗೂ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು (PSPs) ತ್ವರಿತವಾಗಿ ಜಾರಿಗೊಳಿಸಬೇಕು.

– ಕೃತಕ ಬುದ್ಧಿಮತ್ತೆಯಲ್ಲೂ ನಮ್ಮ ರಾಜ್ಯವು ರಾಜಧಾನಿ ಆಗಬೇಕು ಎನ್ನುವ ದಿಕ್ಕಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ. ಹೀಗಾಗಿ ಡೇಟಾ ಸೆಂಟರ್‌ಗಳು, ಕೃತಕ ಬುದ್ಧಿಮತ್ತೆ (AI) ಮೂಲಸೌಕರ್ಯ ಹಾಗೂ ಡಿಜಿಟಲ್ ಆರ್ಥಿಕತೆಯಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು.

– ರೈತರ ಅನುಕೂಲಕ್ಕಾಗಿ ನಮ್ಮ ಸರ್ಕಾರ ಕೃಷಿ ವಿದ್ಯುತ್ ಸಹಾಯಧನವಾಗಿ ವರ್ಷಕ್ಕೆ ₹22,000 ಕೋಟಿ ನೀಡುತ್ತಿದೆ. ಹೀಗಾಗಿ ಫೀಡರ್ ಸೌರೀಕರಣ (Feeder Solarisation), ಇಂಧನ-ದಕ್ಷ ಪಂಪ್‌ಸೆಟ್‌ಗಳ ಬಳಕೆ ಮತ್ತು ವಿದ್ಯುತ್ ಬೇಡಿಕೆ ನಿರ್ವಹಣೆ (Demand Side Management) ಕಾರ್ಯಕ್ರಮಗಳನ್ನು ವೇಗಗೊಳಿಸಬೇಕು.

– 2035ರ ವೇಳೆಗೆ ಗರಿಷ್ಠ ವಿದ್ಯುತ್ ಬೇಡಿಕೆ 38 ಗಿಗಾವ್ಯಾಟ್ (GW) ತಲುಪುವ ನಿರೀಕ್ಷೆಯಿರುವುದರಿಂದ, ಇದಕ್ಕೆ ತಕ್ಕಂತೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಯ ಜೊತೆಗೆ ಅಗತ್ಯವಾದ ಹಣಕಾಸು ನಕ್ಷೆಯನ್ನು (Financing Roadmap) ಸಿದ್ಧಪಡಿಸಬೇಕು.

– ಮೀಟರ್‌ಗಳು ಹಾಗೂ ವಿದ್ಯುತ್ ವಿತರಣಾ ವ್ಯವಸ್ಥೆಯ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರದ ನೆರವು ಪಡೆಯುವ ಉದ್ದೇಶದಿಂದ ಪರಿಷ್ಕೃತ ವಿತರಣಾ ವಲಯ ಯೋಜನೆ (RDSS) ಯನ್ನು ವೇಗವಾಗಿ ಅನುಷ್ಠಾನಗೊಳಿಸಬೇಕು. ಸ್ಮಾರ್ಟ್ ಮೀಟರ್‌ಗಳನ್ನು ಪಾರದರ್ಶಕವಾಗಿ ಹಾಗೂ ನಿಗದಿತ ಸಮಯದಲ್ಲಿ ಅಳವಡಿಸಬೇಕು.

– ರಾಜ್ಯದಲ್ಲಿ ವೇಗವಾಗಿ ಹೆಚ್ಚುತ್ತಿರುವ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸಮರ್ಪಕವಾಗಿ ನಿಭಾಯಿಸಲು ರಾಜ್ಯದ ವಿದ್ಯುತ್ ಜಾಲ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಬೇಕು.

– ವಿದ್ಯುತ್ ಪ್ರಸರಣ ಯೋಜನೆಗಳಿಗೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬೇಕು. ಭೂಸ್ವಾಧೀನ, ಹಕ್ಕುಮಾರ್ಗ (Right of Way) ಹಾಗೂ ಕಾನೂನುಬದ್ಧ ಅನುಮತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ ಯೋಜನೆಗಳನ್ನು ವೇಗಗೊಳಿಸಲು ಸೂಚಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular