HomeKarnatakaSIR ಪ್ರಕ್ರಿಯೆಯಲ್ಲಿ ಲೋಪ: ಕೋಲಾರ, ಮೈಸೂರಿನಲ್ಲಿ ತಹಶಿಲ್ದಾರ್, ಬಿಎಲ್ ಒ ಗಳಿಗೆ ನೋಟಿಸ್ ಜಾರಿ

SIR ಪ್ರಕ್ರಿಯೆಯಲ್ಲಿ ಲೋಪ: ಕೋಲಾರ, ಮೈಸೂರಿನಲ್ಲಿ ತಹಶಿಲ್ದಾರ್, ಬಿಎಲ್ ಒ ಗಳಿಗೆ ನೋಟಿಸ್ ಜಾರಿ

ಬೆಂಗಳೂರು: ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR) ನಡೆಯುತ್ತಿದ್ದು, ಹಲವೆಡೆ ಎಸ್ಐಆರ್ ನಲ್ಲಿ ಲೋಪವೆಸಲಾಗಿರುವ ಆರ್ಫೋಪ ಕೇಳಿಬಂದಿದೆ. ಎಸ್ ಐಆರ‍್ ಲೋಪ ಆರೋದಲ್ಲಿ ಕೋಲಾರ ತಹಶೀಲ್ದಾರ್, ಎಸಿ ಹಾಗೂ ಬಿಎಲ್‌ಒಗಳಿಗೆ ನೋಟಿಸ್ ನೀಡಲಾಗಿದೆ.

ಮತ್ತೊಂದೆಡೆ ಮೈಸೂರಿನಲ್ಲೂ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿ.ವೈ. ವಿಜಯೇಂದ್ರ ಆಡಳಿತ ಯಂತ್ರ ದುರುಪಯೋಗದ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಎಸ್ ಐಆರ್ ಪ್ರಕ್ರಿಯೆಯಲ್ಲಿ ತೀವ್ರ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕೋಲಾರದಲ್ಲಿ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ ಸೇರಿದಂತೆ ಐವರು ಬಿಎಲ್‌ಒಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ. ಇತ್ತ ಮೈಸೂರಿನಲ್ಲೂ ಮನೆ ಮನೆಗೆ ತೆರಳದೆ ನಿಯಮ ಉಲ್ಲಂಘಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನೆ ಮನೆಗೆ ಭೇಟಿ ನೀಡಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದರು. ಆದರೆ ಕೋಲಾರದ ಮತಗಟ್ಟೆ ಸಂಖ್ಯೆ 185 ರಿಂದ 189 ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಬಿಎಲ್‌ಒಗಳು ನಿಯಮಗಳನ್ನು ಗಾಳಿಗೆ ತೂರಿ, ಸಾರ್ವಜನಿಕರನ್ನು ಒಂದೆಡೆ ಗುಂಪು ಸೇರಿಸಿ ಪರಿಷ್ಕರಣೆ ನಡೆಸುತ್ತಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಕೋಲಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಉನ್ನತಾಧಿಕಾರಿಗಳಾದ ತಹಶೀಲ್ದಾರ್ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಮತ್ತು ಮೇಲ್ವಿಚಾರಕ ಮುನಿರಾಜು ಮತ್ತು ಬಿಎಲ್‌ಒಗಳಾದ ಮೊಹಮ್ಮದ್ ಆರೀಫ್ ಪಾಷಾ, ನಾಜಿಯಾ ಖಾನುಂ, ರೇಷ್ಮಾ ತಲಾತ್, ಪರ್‌ವೀನ್ ಉನ್ನೀಸಾ ಮತ್ತು ಉಮದಾ ಬಾನು ಇವರಲ್ಲರಿಗೂ ನೋಟಿಸ್ ನೀಡಲಾಗಿದೆ.

ಇದೇ ರೀತಿಯ ಮೈಸೂರು ಜಿಲ್ಲೆಯಲ್ಲೂ ಲೋಪವಾಗಿದೆ ಎಂದು ವರದಿಯಾಗಿದೆ. ಮೈಸೂರಿನ ಎನ್.ಆರ್. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್‌ಒಗಳು ಸಾರ್ವಜನಿಕ ಸ್ಥಳ ಹಾಗೂ ಮತಗಟ್ಟೆ ಕೇಂದ್ರಗಳಲ್ಲಿ ಸಾರ್ವಜನಿಕರನ್ನು ಗುಂಪುಗೂಡಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮನೆ ಮನೆಗೆ ತೆರಳಿ ಅಧಿಕಾರಿಗಳು ಪಾರದರ್ಶಕವಾಗಿ ಪರಿಷ್ಕರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular