HomeKarnatakaನಡೆದುಕೊಳ್ಳುವ ರೀತಿ ಚೆನ್ನಾಗಿರಲಿ ವಿಜಯಲಕ್ಷ್ಮಿ ದರ್ಶನ್‌ರ ಪೋಸ್ಟ್ ವೈರಲ್: ಟಾಂಗ್ ಕೊಟ್ಟಿದ್ದು ಯಾರಿಗೆ?

ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ ವಿಜಯಲಕ್ಷ್ಮಿ ದರ್ಶನ್‌ರ ಪೋಸ್ಟ್ ವೈರಲ್: ಟಾಂಗ್ ಕೊಟ್ಟಿದ್ದು ಯಾರಿಗೆ?

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಕೇವಲ ಒಂದು ಸಾಲಿನ ಪೋಸ್ಟ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ದರ್ಶನ್ ಅಭಿಮಾನಿ ಬಳಗದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿರುವ ಈ ಪೋಸ್ಟ್‌ ಬೆಲ್ಲಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಬ್ಬ ಯುವ ನಟನ ಹೆಸರು ಮುನ್ನೆಲೆಗೆ ಬಂದಿದೆ.

ಸಾಮಾನ್ಯವಾಗಿ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣವನ್ನು ಬಲು ಅಪರೂಪಕ್ಕೆ ಬಳಸುತ್ತಾರೆ. ಸುಖಾ-ಸುಮ್ಮನೆ ಯಾವುದೇ ಕೋಟ್​​ಗಳನ್ನು ಹಂಚಿಕೊಳ್ಳದ ಅವರು, ಯಾರಿಗಾದರೂ ಪರೋಕ್ಷವಾಗಿ ಸಂದೇಶ ತಲುಪಿಸಲು ಅಥವಾ ತಮ್ಮ ಅಸಹಮತವನ್ನು ವ್ಯಕ್ತಪಡಿಸಲಷ್ಟೇ ಇಂತಹ ಪೋಸ್ಟ್‌ಗಳನ್ನು ಬಳಸುತ್ತಾರೆ.

ವಿಜಯಲಕ್ಷ್ಮಿ ಅವರ ಪೋಸ್ಟ್‌ನಲ್ಲೇನಿದೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಲಕ್ಷ್ಮಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ.. ಅದು ವಸ್ತುವಾಗಲಿ, ವ್ಯಕ್ತಿಯಾಗಲಿ..” ಎಂಬ ಅರ್ಥಗರ್ಭಿತ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಸಾಲುಗಳು ಮೇಲ್ನೋಟಕ್ಕೆ ಒಂದು ಉತ್ತಮ ಜೀವನ ಸಂದೇಶದಂತೆ ಕಂಡರೂ, ಸದ್ಯದ ಪರಿಸ್ಥಿತಿಯಲ್ಲಿ ಇದು ಮಾಜಿ ಆಪ್ತರೊಬ್ಬರನ್ನು ಗುರಿಯಾಗಿಸಿ ಆಡಿರುವ ಮಾತುಗಳಾ ಎಂಬ ಚರ್ಚೆ ಜೋರಾಗಿದೆ.

ನಟ ಧನ್ವೀರ್ ಹೆಸರು ಪ್ರಸ್ತಾಪಿಸಿದ ನೆಟ್ಟಿಗರು: ಏನಿದು ಸಣ್ಣ ಮನಸ್ತಾಪ?

ವಿಜಯಲಕ್ಷ್ಮಿ ಅವರು ಈ ಪೋಸ್ಟ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಆದರೆ, ನೆಟ್ಟಿಗರು ಮತ್ತು ಸ್ಯಾಂಡಲ್‌ವುಡ್ ಪ್ರೇಕ್ಷಕರು ಇದನ್ನು ಇತ್ತೀಚಿನ ಕೆಲವು ಬೆಳವಣಿಗೆಗಳಿಗೆ ಲಿಂಕ್ ಮಾಡುತ್ತಿದ್ದಾರೆ:

ದರ್ಶನ್ ಜೈಲು ಸೇರಿದ ಬಳಿಕ ಅವರ ಕುಟುಂಬಕ್ಕೆ ಸಹೋದರನಂತೆ ಬೆಂಬಲವಾಗಿ ನಿಂತಿದ್ದ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಕುಟುಂಬದ ನಡುವೆ ಇತ್ತೀಚೆಗೆ ಸಣ್ಣ ಮನಸ್ತಾಪ ಉಂಟಾಗಿದೆ ಎಂಬ ವದಂತಿ ದಟ್ಟವಾಗಿದೆ.

ದರ್ಶನ್ ಅವರ ಒಡನಾಟದಿಂದಲೇ ಗುರುತಿಸಿಕೊಂಡಿದ್ದ ಧನ್ವೀರ್ ಇತ್ತೀಚೆಗೆ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದ್ದು, ಇದನ್ನೇ ಮುಂದಿಟ್ಟುಕೊಂಡು ಚರ್ಚೆ ನಡೆಸುತ್ತಿರುವ ನೆಟ್ಟಿಗರು, “ವಿಜಯಲಕ್ಷ್ಮಿ ಅವರು ಈ ಖಡಕ್ ಸಂದೇಶವನ್ನು ಧನ್ವೀರ್ ಅವರಿಗಾಗಿಯೇ ಹಾಕಿದ್ದಾರಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಈ ಬಗ್ಗೆ ಇಬ್ಬರಿಂದಲೂ ಯಾವುದೇ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ.

ಇತ್ತ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ಪ್ರಕ್ರಿಯೆಗೆ ಮತ್ತೆ ಹಿನ್ನಡೆ

ಮತ್ತೊಂದೆಡೆ, ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿದ್ದ ಆದೇಶದ ಸ್ಪಷ್ಟೀಕರಣ ಹಾಗೂ ಮಾರ್ಪಾಡು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ರಿಜಿಸ್ಟ್ರಾರ್ ನ್ಯಾಯಾಲಯ ಹೇಳಿದ್ದೇನು?

“ಆದೇಶದ ಮಾರ್ಪಾಡು ಅಥವಾ ಸ್ಪಷ್ಟೀಕರಣ ಕೋರುವ ನೆಪದಲ್ಲಿ, ಅರ್ಜಿದಾರರು (ದರ್ಶನ್) ವಾಸ್ತವವಾಗಿ ತೀರ್ಪಿನ ಮರುಪರಿಶೀಲನೆಯನ್ನು ಬಯಸುತ್ತಿದ್ದಾರೆ” ಎಂದು ರಿಜಿಸ್ಟ್ರಾರ್ ನ್ಯಾಯಾಲಯವು ಅಭಿಪ್ರಾಯಪಟ್ಟಿದ್ದು, ಈ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಮೇ 15ರಂದು ನಡೆದಿದ್ದ ವಿಚಾರಣೆಯ ವೇಳೆ, ರೇಣುಕಸ್ವಾಮಿ ಕೊಲೆ ಪ್ರಕರಣದ ತೀವ್ರತೆಯನ್ನು ಪರಿಗಣಿಸಿ ನಟ ದರ್ಶನ್ ಕನಿಷ್ಠ ಒಂದು ವರ್ಷದವರೆಗೆ ಜಾಮೀನು ಪಡೆಯಲು ಅರ್ಹರಲ್ಲ ಎಂಬ ಮಹತ್ವದ ಆದೇಶ ಹೊರಬಿದ್ದಿತ್ತು. ಈಗ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಈ ಸ್ಪಷ್ಟೀಕರಣ ಅರ್ಜಿಯನ್ನೇ ವಜಾಗೊಳಿಸಿರುವುದರಿಂದ, ದರ್ಶನ್ ಅವರ ಜಾಮೀನು ಪ್ರಕ್ರಿಯೆಗೆ ಮತ್ತಷ್ಟು ಕಾನೂನು ತೊಡಕುಗಳು ಎದುರಾದಂತಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular