HomeKarnatakaಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಕೆಇಎ ಮುಖ್ಯ ಮಾಹಿತಿ | Civil Police Recruitment

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಕೆಇಎ ಮುಖ್ಯ ಮಾಹಿತಿ | Civil Police Recruitment

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ದಿನಾಂಕವನ್ನು ಜುಲೈ 8ರವರೆಗೆ ವಿಸ್ತರಿಸಲಾಗಿದೆ.

ಹಲವು ಅಭ್ಯರ್ಥಿಗಳು ಅರ್ಜಿಯಲ್ಲಿ ದಾಖಲಿಸಿರುವ ದೋಷಗಳ ತಿದ್ದುಪಡಿಗೂ ಅವಕಾಶ ಕೋರಿದ್ದಾರೆ. ಅಂತಹವರಿಗೆ ಅನುಕೂಲ ಆಗುವ ಹಾಗೆ ಜುಲೈ10ರಿಂದ 13ರವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಹಾಗೂ ಅರ್ಜಿ ತಿದ್ದುಪಡಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 05.06.2026 ರಂದು ಉಳಿಕೆ ಮೂಲಕ ವೃಂದ ಹಾಗೂ ಸ್ಥಳೀಯ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 03.07.2026 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಶುಲ್ಕ ಪಾವತಿಸಲು ದಿನಾಂಕ 04.07.2026 ನ್ನು ಕೊನೆಯ ದಿನಾಂಕವನ್ನಾಗಿ ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು.

ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿ, ವಿವಿಧ ಕಾರಣಗಳಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಹಾಗೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ತಪ್ಪಾದ ಮಾಹಿತಿಗಳನ್ನು ನಮೂದಿಸಿದ ಹಿನ್ನಲೆಯಲ್ಲಿ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡುವಂತೆ ಕೋರಿರುತ್ತಾರೆ.

ಅನೇಕ ಅಭ್ಯರ್ಥಿಗಳ ಮನವಿಗಳನ್ನು ಪರಿಗಣಿಸಿ, ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ತಿದ್ದುಪಡಿ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular