ಬೆಂಗಳೂರು: ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ರಾಜಕೀಯ ತಿರುವು ಪಡೆದುಕೊಂಡಿದ್ದು, ದೂರು ನೀಡಲು ಬಿಜೆಪಿ, ಜೆಡಿಎಸ್ ನಿರ್ಧರಿಸಿವೆ.
ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ಮೈತ್ರಿ ಪಕ್ಷದ ನಾಯಕರು ದೂರು ನೀಡಲಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು.
ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ದೂರು ನೀಡಲಿದ್ದು, ಮನೆಮನೆ ಸಮೀಕ್ಷೆ ಬದಲಿಗೆ ಸಮುದಾಯ ಭವನ, ಕಲ್ಯಾಣ ಮಂದಿರ, ಮಸೀದಿ, ದೇವಾಲಯಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಿದ ಆರೋಪ ಕೇಳಿ ಬಂದಿದೆ. ಇದುವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸುವಂತೆ ಒತ್ತಾಯಿಸಲಾಗುವುದು. ಲೋಪ ಕಂಡು ಬಂದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಕ್ಷದ ನಾಯಕರು ದೂರು ನೀಡಲಿದ್ದಾರೆ ಎನ್ನಲಾಗಿದೆ.

