HomeKarnatakaರಾಜ್ಯದಲ್ಲಿ ಜುಲೈ 10ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ರಾಜ್ಯದಲ್ಲಿ ಜುಲೈ 10ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಜುಲೈ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಮತ್ತು ಕೆಲವು ಕಡೆಗಳಲ್ಲಿ ಭಾರಿ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರೀ ಆಗುವ ಸಂಭವವಿದೆ ಎಂದು ಹೇಳಲಾಗಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಇದೆ. ತಗ್ಗು ಪ್ರದೇಶ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವ ಇದೆ. ಇನ್ನು ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular