ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮುನ್ನೆಚರಿಕೆ ಕ್ರಮವಾಗಿ ಹೊಸನಗರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.
ಅದೇ ರೀತಿ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಲಾಗಿದೆ. ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

