HomeLatest NewsSHOCKING : ಸ್ವಂತ ತಾಯಿಯ ಮೇcಲೆಯೇ ಮಗನಿಂದ ಲೈಂಗಿಕ ದೌರ್ಜನ್ಯ ; ಬಾಯಿಗೆ ಬಟ್ಟೆ ತುರುಕಿ...

SHOCKING : ಸ್ವಂತ ತಾಯಿಯ ಮೇcಲೆಯೇ ಮಗನಿಂದ ಲೈಂಗಿಕ ದೌರ್ಜನ್ಯ ; ಬಾಯಿಗೆ ಬಟ್ಟೆ ತುರುಕಿ ಹಲ್ಲೆ

ಹೈದರಾಬಾದ್: ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಾಜಿಗಿರಿ ಜಿಲ್ಲೆಯ ಘಟ್ಕೇಸರ್‌ನಲ್ಲಿ ಬೆಳಕಿಗೆ ಬಂದಿದೆ. ಸ್ವಂತ ಮಗನೇ ತನ್ನ 56 ವರ್ಷದ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಮೂಲದ 56 ವರ್ಷದ ಮಹಿಳೆ ಜೀವನೋಪಾಯಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದು, ಘಟ್ಕೇಸರ್‌ನಲ್ಲಿರುವ ಕಟ್ಟಡವೊಂದರ ನೆಲಮಹಡಿಯಲ್ಲಿ ವಾಸವಿದ್ದು ಮನೆಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೊದಲ ಪತಿಯಿಂದ ಜನಿಸಿದ ಎರಡನೇ ಪುತ್ರ ವಿಜಯ್ (25) ಕಳೆದ ಎರಡು ತಿಂಗಳಿಂದ ತಾಯಿಯೊಂದಿಗೇ ವಾಸಿಸುತ್ತಿದ್ದ.

ಆರೋಪಿ ವಿಜಯ್ ಆಗಾಗ ಮದ್ಯಪಾನ ಮಾಡಿ ಮನೆಗೆ ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದ ಹಾಗೂ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಜುಲೈ 3ರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದ ವಿಜಯ್, ಮತ್ತೆ ತಾಯಿಯೊಂದಿಗೆ ಜಗಳವಾಡಿ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯ ಕುತ್ತಿಗೆಗೆ ವಿದ್ಯುತ್ ತಂತಿ ಸುತ್ತಿ ಬೆದರಿಕೆ ಹಾಕಿದ್ದಲ್ಲದೆ, ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸುವ ಪ್ರಯತ್ನ ಮಾಡಿ ಮತ್ತೊಮ್ಮೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಧೈರ್ಯದಿಂದ ಸಂತ್ರಸ್ತೆ ಘಟ್ಕೇಸರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular