ಬೆಂಗಳೂರು: ದೇವನಹಳ್ಳಿ ತಾಲೂಕು ಕಚೇರಿ, ಭೂ ಮಾಪನ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ತಾಲೂಕು ಕಚೇರಿ, ಭೂ ಮಾಪನ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ತಾಲೂಕು ಕಚೇರಿ ಮತ್ತು ಭೂಮಾಪನ ಇಲಾಖೆ ಕಚೇರಿಗಳ ಕುರಿತಾಗಿ ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

