ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಐವರು ಮೇಲೆ ಹರಿದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ವೇಗದ ಲಾರಿಯೊಂದು ರಸ್ತೆ ಬದಿಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಜೈಪುರದ ಶ್ಯಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 200 ಫೀಟ್ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿಯ ಚರಂಡಿಯ ಮೇಲ್ಭಾಗದ ಕಾಂಕ್ರೀಟ್ ಮುಚ್ಚಳದ ಮೇಲೆ ನಿಂತಿದ್ದ ಐವರು ಮೇಲೆ ಟ್ರಕ್ ಹರಿದಿದೆ. ಮೊದಲು ಟ್ರಕ್ ಕಬ್ಬಿಣದ ರೇಲಿಂಗ್‌ಗೆ ಡಿಕ್ಕಿ ಹೊಡೆದು ಬಳಿಕ ಜನರಿದ್ದ ಸ್ಥಳಕ್ಕೆ ನುಗ್ಗಿದೆ.
ಡಿಕ್ಕಿಯ ತೀವ್ರತೆಗೆ ಚರಂಡಿಯ ಮುಚ್ಚಳ ಕುಸಿದ ಪರಿಣಾಮ ಐವರು ಚರಂಡಿಗೆ ಬಿದ್ದಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ತೀವ್ರತೆಗೆ ಮೃತದೇಹಗಳು ತೀವ್ರವಾಗಿ ಛಿದ್ರಗೊಂಡಿದ್ದು, ಒಂದು ಮೃತದೇಹ ಎರಡು ಭಾಗಗಳಾಗಿರುವುದಾಗಿ ವರದಿಯಾಗಿದೆ. ಅಪಘಾತದ ನಂತರ ಪೊಲೀಸರು ಕ್ರೇನ್ ಸಹಾಯದಿಂದ ಹಾನಿಗೊಳಗಾದ ಟ್ರಕ್ ಅನ್ನು ರಸ್ತೆದಿಂದ ತೆರವುಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವಾದ ನಿಖರ ಸಂದರ್ಭದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

