HomeKarnatakaಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಧಾರವಾಡ: ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರು, ಧಾರವಾಡ ಕೃಷಿ ಇಲಾಖೆ ಕಚೇರಿಯ ಅಧೀನ ಕಚೇರಿಗಳಾದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಚೇರಿಗಳಲ್ಲಿ ಖಾಲಿ ಇರುವ ನೇರಗುತ್ತಿಗೆ ಆಧಾರದಡಿ ಮಾಸಿಕ ಗೌರವಧನ ರೂ.25,000 ಗಳಿಗೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು(ATM)  ನಾಲ್ಕು (4) ಹುದ್ದೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನಗಳಲ್ಲಿ ಪದವಿ, ಸ್ನಾತಕೊತ್ತರ ಪದವಿ ಪಡೆದವರು ಹಾಗೂ ಕನಿಷ್ಠ 1 ವರ್ಷ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿ ಆಯ್ಕೆಯು ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಮೂಲಕ ಮಾಡಲಾಗುವುದು. ಅನುಬಂಧ 1 (A) ರಲ್ಲಿ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು, ಅಭ್ಯರ್ಥಿಗಳು ಛಾಯಾಚಿತ್ರದೊಂದಿಗೆ ಮಾಹಿತಿ ಭರ್ತಿ ಮಾಡಿ, ಜನ್ಮ ದಿನಾಂಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ಜಾತಿ ಪ್ರಮಾಣ ಪತ್ರ), ವಿದ್ಯಾರ್ಹತೆ, ಕೆಲಸದ ಅನುಭವ, ಹಿಂದಿನ ಹುದ್ದೆಯ ಅಂತಿಮ ವೇತನ ಪ್ರಮಾಣ ಪತ್ರ, ನಡತೆ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ ಪ್ರಮಾಣ ಪತ್ರಗಳ ದಾಖಲಾತಿಗಳನ್ನು ದೃಢೀಕರಣದೊಂದಿಗೆ ಜುಲೈ 20, 2026 ರೊಳಗಾಗಿ ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಆತ್ಮ ವಿಭಾಗಕ್ಕೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular