HomeKarnatakaರಾಜ್ಯದಲ್ಲಿ ಮುಂದುವರೆದ ಧಾರಾಕಾರ ಮಳೆ: ಇಂದೂ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಧಾರಾಕಾರ ಮಳೆ: ಇಂದೂ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಸೋಮಶೇಖರ್ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ, ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ರಜೆ ನೀಡಿ ಆದೇಶ ಹೊರಡಿಸಲಾಗಿದೆ.

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕು ಶಾಲೆಗಳಿಗೆ ರಜೆ ನೀಡಲಾಗಿದೆ. 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಚಿಕ್ಕಮಗಳೂರಿನ ಆಲ್ದೂರು, ಜಾಗರ, ಆವತಿ, ಖಾಂಡ್ಯ, ವಸ್ತಾರೆ ಹೋಬಳಿಯ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ರಜೆ ಘೋಷಣೆ ಮಾಡಿದ್ದಾರೆ.

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇಂದು ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿಪ್ಪಾಣಿ, ಖಾನಾಪುರ, ಬೆಳಗಾವಿ ತಾಲೂಕಿನಲ್ಲಿ ಇಂದು ರಜೆ ನೀಡಲಾಗಿದೆ, ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್  ಆದೇಶಿಸಿದ್ದಾರೆ.

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಮೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಹೊಸನಗರ ತಹಶೀಲ್ದಾರ್ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪ್ರತಿಭಾ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಹವಾಮಾನ ಇಲಾಖೆಯ ಅಲರ್ಟ್ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 2026ರ ಜುಲೈ 8 ಬುಧವಾರ ರಂದು ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ನದಿ-ಹಳ್ಳಗಳ ಸಮೀಪ ಅನಗತ್ಯವಾಗಿ ತೆರಳದಂತೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ತೀರ್ಥಹಳ್ಳಿ ತಾಲೂಕು ತಹಶೀಲ್ದಾರ್ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular