HomeIndiaಅಡಿಕೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ: ರಾಜ್ಯದ ನಿಯೋಗಕ್ಕೆ ಮಹಾರಾಷ್ಟ್ರ ಸಿಎಂ ಭರವಸೆ

ಅಡಿಕೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ: ರಾಜ್ಯದ ನಿಯೋಗಕ್ಕೆ ಮಹಾರಾಷ್ಟ್ರ ಸಿಎಂ ಭರವಸೆ

ಕರ್ನಾಟಕದ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿದ್ದ ಅಡಿಕೆ ಸರಕು ವಾಹನಗಳ ಬಿಡುಗಡೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಯಶಸ್ವಿಯಾಗಿ ಮಾತುಕತೆ ನಡೆಸಿದ್ದಾರೆ.

ತಡೆಹಿಡಿದ ಲಾರಿಗಳನ್ನು ಬಿಡುಗಡೆ ಮಾಡುವಂತೆ ಮನವೊಲಿಸಿದ್ದು, ರಾಜ್ಯದ ಅಡಿಕೆ ಬೆಳೆಗಾರರು ಮತ್ತು ವರ್ತಕರ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಜೋಶಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಹಾರಾಷ್ಟ್ರ ಸಿಎಂ ತಡೆಹಿಡಿದ ಕರ್ನಾಟಕದ ಅಡಿಕೆ ಸರಕು ಲಾರಿಗಳನ್ನು ತಕ್ಷಣವೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಕುರಿತಾಗಿ ಮಾಹಿತಿ ನೀಡಿರುವ ಪ್ರಲ್ಹಾದ್ ಜೋಶಿ, ಕರ್ನಾಟಕದ ಪ್ರಮುಖ ಅಡಿಕೆ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ (CAMPCO), ಮಾಮ್ಕೋಸ್ (MAMCOS), ಟುಮ್ಕೋಸ್ (TUMCOS) ಹಾಗೂ ರಾಜ್ಯ ಅಡಿಕೆ ಸಹಕಾರಿ ಮಹಾಮಂಡಳದ ನಿಯೋಗ ನನ್ನನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ವಿನಂತಿಸಿತ್ತು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರದಾದ್ಯಂತ ಅಡಿಕೆ ಸಾಗಣೆ ವಾಹನಗಳನ್ನು ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ ತಡೆಹಿಡಿಯಲಾಗಿದೆ. ಇದರಿಂದಾಗಿ ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಬೇಕಿದ್ದ ನಮ್ಮ ರೈತರ ಅಡಿಕೆ ಬೆಳೆ ಹಾನಿಗೊಳಗಾಗಿ, ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ.

ರೈತರ ಹಿತರಕ್ಷಣೆಗೆ ಧಾವಿಸಿ, ಈ ಗಂಭೀರ ಸಮಸ್ಯೆಯ ಕುರಿತು ತಕ್ಷಣವೇ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚಿಸಲಾಯಿತು. ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಫಡ್ನವೀಸ್ ಅವರು, ತಡೆಹಿಡಿಯಲಾಗಿರುವ ಅಡಿಕೆ ಸರಕನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಸಾಗಣೆಗೆ ಯಾವುದೇ ಅಡ್ಡಿಯಾಗದಂತೆ ಅಗತ್ಯವಿರುವ ಎಲ್ಲಾ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

ಅಡಿಕೆ ಬೆಳೆಗಾರರ ಬೆನ್ನಿಗೆ ಸದಾ ನಿಲ್ಲುವ ನಮ್ಮ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ರಾಜ್ಯದ ಸಮಸ್ತ ರೈತ ಬಾಂಧವರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಈ‌‌ ಸಂದರ್ಭದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ರಾಜೇಶ್‌ ನಾಯಕ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular