HomeKarnatakaBREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದಿರುವ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲಿಸಿದ್ದಾರೆ.   

ಕಲಬುರಗಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಜೆಸ್ಕಾ ಎಇಇ  ಅಮೃತರಾವ್ ಯಲಾಲ್ ಮನೆ ಕಚೇರಿ ಸೇರಿ 7 ಕಡೆ ದಾಳಿ ನಡೆಸಲಾಗಿದೆ. ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿ ಮನೆ, ಬಸವ ಅಪಾರ್ಟ್ಮೆಂಟ್ ನಲ್ಲಿರುವ ಫ್ಲಾಟ್, ಕಲಬುರಗಿಯ ಕೊತ್ತಂಬರಿ ಲೇಔಟ್ ನಲ್ಲಿರುವ ಜೆಸ್ಕಾಂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿರುವ ಮನೆಯ ಮೇಲೆಯೂ ದಾಳಿ ನಡೆದಿದೆ. ಜಾಗೃತಿ ಕಾಲೋನಿಯಲ್ಲಿರುವ ಪ್ಲಾಟಿನಂ ಸ್ಟುಡಿಯೋ ಹೊಂದಿರುವ ಅಮೃತರಾವ್ ನಂದೂರು ಕೈಗಾರಿಕಾ ಪ್ರದೇಶದಲ್ಲಿ ಆಸ್ತಿ ಹೊಂದಿದ್ದಾರೆ. 20ಕ್ಕೂ ಹೆಚ್ಚು ಎಕರೆ ಜಮೀನು ಹೊಂದಿರುವ ಅಮೃತ ರಾವ್ ಅವರಿಗೆ ಸಂಬಂಧಿಸಿದ 7 ಸ್ಥಲಲ್ಲಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಎಸಿಎಫ್ ಕಿರಣ್ ಅಂಗಡಿ ಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಕಚೇರಿ ಮತ್ತು ಧಾರವಾಡದ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಧಾರವಾಡ ನಗರದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿರುವ ಮನೆ, ಆಳ್ನಾವರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಹಾಗೂ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಕಿರಣ್ ಅಂಗಡಿ ಹೊಂದಿರುವ ಫ್ಯಾಕ್ಟರಿ ಮೇಲೆ ದಾಳಿ ಮಾಡಲಾಗಿದೆ. ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ ನಡೆಸಲಾಗಿದೆ. ಶಿವಮೊಗ್ಗ, ಧಾರವಾಡ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆದಿದೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ದಾಳಿಯ ವೇಳೆ ಎಸಿಎಫ್ ಕಿರಣ್ ಅಂಗಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬಬ್ಬೂರು ಗ್ರಾಮದಲ್ಲಿ ಪ್ರೊ. ಶಂಕರ್ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಬಬ್ಬೂರು ತೋಟಗಾರಿಕೆ ವಿವಿ ಪ್ರೊ. ಶಂಕರ್ ಅವರ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಮನೆ ಮೇಲೆ ದಾಳಿ ನಡೆದಿದೆ.

ಚಿತ್ರದುರ್ಗದಲ್ಲಿ ಆರ್ಎಫ್ಒ ದುರ್ಗಪ್ಪ ಮನೆ ಮೇಲೆ ದಾಳಿ ನಡೆಸಲಾಗಿದೆ. ಧವಳಗಿರಿ ಬಡಾವಣೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಕುಂಬಳಗೂಡು ಪಿಡಿಒ ಬಿ.ಕೆ. ತಿಮ್ಮಯ್ಯನವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬಿ.ಕೆ. ತಿಮ್ಮಯ್ಯನವರ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕುಂಬಳಗೂಡು, ಮಾಗಡಿ ತಾಲೂಕಿನ ಬೆಳಗವಾಡಿ ಗ್ರಾಮ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಪಿಡಿಒ ತಿಮ್ಮಯ್ಯರಿಗೆ ಸೇರಿದ ತೋಟದ ಮನೆ, ಅವರ ಅಣ್ಣ ರಾಮಚಂದ್ರಯ್ಯ ಹಾಗೂ ಅಕ್ಕನ ಮಗ ದಿಲೀಪ್ ಅವರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಎಇ ಬಸನಗೌಡ ಅವರಿಗೆ ಸೇರಿದ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿ ಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಬಸನಗೌಡ ಅವರು ಪತ್ನಿ ಹೆಸರಿನಲ್ಲಿ ಭಾರಿ ಪ್ರಮಾಣದ ಆಸ್ತಿ ಮಾಡಿದ್ದಾರೆ ಎನ್ನಲಾಗಿದ್ದು, ರಾಯಚೂರಿನ ಹೆಚ್.ಆರ್.ಬಿ. ಲೇಔಟ್ ನಲ್ಲಿರುವ ಮನೆ, ಯಕ್ಲಾಸಪುರದಲ್ಲಿ ಮೂರು ಮನೆಗಳು ಹಾಗೂ ತೋಟದ ಮನೆ, ಚಿಕ್ಕಹೊನ್ನಕುಣಿಯ ಕೆಬಿಜೆಎನ್ಎಲ್ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ಪೆಟ್ರೋಲ್ ಬಂಕ್, ರಾಯಚೂರು ಬೈಪಾಸ್ ರಸ್ತೆಯ ಮತ್ತೊಂದು ಪೆಟ್ರೋಲ್ ಬಂಕ್, ಅದರ ಪಕ್ಕದ ಗೋದಾಮು, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular