ಧಾರವಾಡ : 2026-27 ನೇ ಸಾಲಿನ ಕೃಷಿ ಯಾಂತ್ರಿಕರಣ ಉಪ ಅಭಿಯಾನ ಯೋಜನೆ (SMAM) ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (PMKSY) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಆಸಕ್ತಿಯುಳ್ಳ ರೈತರಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೊದಲು ಬಂದ ರೈತರಿಗೆ ಆದ್ಯತೆ ಮೇರೆಗೆ ಜೇಷ್ಠತೆ ಅನುಸಾರವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವದು. ರೈತರು ಸದರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನ
ಧಾರವಾಡ : 2026-27 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶುಲ್ಕ ಮರುಪಾವತಿ ಯೋಜನೆಗಳಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (1 ನೇ ರಿಂದ 8 ನೇ ತರಗತಿ) ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಪ್ಟೆಂಬರ್ 30, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0836-2971590, ಧಾರವಾಡ: 9738287549, ಹುಬ್ಬಳ್ಳಿ: 8867718261, ಕಲಘಟಗಿ: 9538912399, ಕುಂದಗೋಳ: 8904661872, ನವಲಗುಂದ: 8746894524 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

