HomeKarnatakaದಾವಣಗೆರೆ ಜಿಲ್ಲೆಯ ಒಂಟಿಹಾಳ ತಂಬಾಕು ಮುಕ್ತ ಗ್ರಾಮ ಘೋಷಣೆ

ದಾವಣಗೆರೆ ಜಿಲ್ಲೆಯ ಒಂಟಿಹಾಳ ತಂಬಾಕು ಮುಕ್ತ ಗ್ರಾಮ ಘೋಷಣೆ

ದಾವಣಗೆರೆ: ಯುವಕರು ಯಾವುದೇ ದುಶ್ಚಟಕ್ಕೆ ಒಳಗಾಗದೆ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಪ್ರತಿ ಗ್ರಾಮವನ್ನು ಸಹ ತಂಬಾಕು ಮುಕ್ತ ಗ್ರಾಮವನ್ನಾಗಿ ಮಾಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಶ್ರೀಧರ್ ಮೂರ್ತಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಗ್ರಾಮ ಪಂಚಾಯತ್ ಬಾಡ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಒಂಟಿಹಾಳ ಗ್ರಾಮವನ್ನ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಿ ಅವರು ಮಾತನಾಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದಂತೆ ತಂಬಾಕು ಮುಕ್ತ ಹಳ್ಳಿ ಮಾರ್ಗಸೂಚಿ ಅನ್ವಯ ಒಂಟಿಹಾಳ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲಿ ಎಲ್ಲಾ ತಾಯಂದಿರು ಅವರವರ ಕುಟುಂಬದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಛಾಪು ಮೂಡಿಸಿ ಪ್ರತಿ ಮನೆಯನ್ನು ತಂಬಾಕು ಮುಕ್ತ ಮಾಡಿದ್ದೆ ಆದಲ್ಲಿ ತಂಬಾಕು ಮುಕ್ತ ಗ್ರಾಮ, ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಭಾಗಿಯ ಸಂಯೋಜಕರು ಮಹಾಂತೇಶ್ ಉಳ್ಳಾಗಡ್ಡಿ ಮಾತನಾಡಿ, ತಂಬಾಕು ಸೇವನೆಯಿಂದ ನಾನಾ ತರದ ಮಾರಣಾಂತಿಕ ಕಾಯಿಲೆಗಳು ಬರುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಬಾಯಿ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಇನ್ನೂ ಮುಂತಾದ ಕ್ಯಾನ್ಸರ್ ಗಳು, ಹೃದಯಘಾತ, ಪಾರ್ಶ್ವವಾಯು ಆಗುತ್ತಿದ್ದು, ಇಂತಹ ಮಾರಣಾಂತಿಕ ಕಾಯಿಲೆಗಳನ್ನು ತಡೆಯಲಿಕ್ಕೆ ತಂಬಾಕು ಮುಕ್ತ ಗ್ರಾಮ ಎಂಬ ಶೀರ್ಷಿಕೆ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ನಾವೆಲ್ಲರೂ ಸೇರಿ ತಂಬಾಕನ್ನು ಬಳಸದಂತೆ ಕ್ರಮವಹಿಸೋಣ ಮತ್ತು ಗ್ರಾಮದಲ್ಲಿ ತುಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಠಾನ ಮಾಡೋಣ ಎಂದು ಹೇಳಿದರು.

ಬಾಡ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ರಾಜಪ್ಪ, ಗ್ರಾಮದ ತಂಬಾಕು ನಿಯಂತ್ರಣ ರಾಯಬಾರಿ ಶಾಂತಮ್ಮ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ, ಪ್ರಭು, ಸಾಮಾಜಿಕ ಕಾರ್ಯಕರ್ತೆ ಶೈಲಾ ಶಾಮನೂರು, ಸಮುದಾಯ ಆರೋಗ್ಯ ಅಧಿಕಾರಿ ರುದ್ರೇಶ್, ಸ್ನಾತಕೋತ್ತರ ವಿದ್ಯಾರ್ಥಿನಿ ಪಲ್ಲವಿ, ಶಾಲೆಯ ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಹಾಗೂ ಊರಿನ ಪ್ರಮುಖರು, ಶಾಲಾ ಮಕ್ಕಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular