HomeKarnatakaಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 (ಚಿಕ್ಕಮಗಳೂರು-ಮಂಗಳೂರು) ರಲ್ಲಿನ ತನಿಕೋಡ್ ಚೆಕ್ ಪೋಸ್ಟ್ ಮತ್ತು ಎಸ್.ಕೆ. ಬಾರ್ಡರ್ ನಡುವಿನ ರಸ್ತೆಯ ಶಿಥಿಲಾವಸ್ಥೆಯ ಕಾರಣದಿಂದಾಗಿ, 12 ಟನ್‌ಗಿಂತ ಹೆಚ್ಚಿನ ತೂಕದ ಭಾರಿ ವಾಹನಗಳ ಸಂಚಾರವನ್ನು 2026ರ ಸೆಪ್ಟೆಂಬರ್ 30ರವರೆಗೆ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡಿನಿಂದ ಎಸ್.ಕೆ. ಬಾರ್ಡರ್ ವರೆಗಿನ 18 ಕಿಲೋಮೀಟರ್ ರಸ್ತೆಯಲ್ಲಿ ಸೇತುವೆಗಳು ಶಿಥಿಲಾವಸ್ಥೆ ತಲುಪಿರುವುದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ 12 ಟನ್ ಗಿಂತ ಅಧಿಕ ಬಾರದ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಬುಧವಾರ ಆದೇಶಿಸಿದ್ದಾರೆ.

ಈ ಭಾಗದಲ್ಲಿ 1950, 1960ನೇ ಸಾಲಿನಲ್ಲಿ ಕಲ್ಲಿನಿಂದ ನಿರ್ಮಿಸಿದ ಸೇತುವೆಗಳು ಶಿಥಿಲಾವಸ್ಥೆ ತಲುಪಿವೆ. ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕೊರೆತ ಉಂಟಾಗಿದ್ದು, ಕಿರಿದಾದ ರಸ್ತೆಯಾದ ಕಾರಣ ವಾಹನಗಳು ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರ್ಯಾಯ ಮಾರ್ಗ

ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

ಎನ್ಆರ್ ಪುರ ಕಡೆಯಿಂದ ಬರುವ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.

ಕೊಪ್ಪ ಕಡೆಯಿಂದ ಬರುವ ವಾಹನಗಳು ಕೊಪ್ಪ, ಜಯಪುರ, ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular