HomeKarnataka'ವ್ಯಾಜ್ಯ' ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಂದು ಅವಕಾಶ ; ಜುಲೈ 11 ರಂದು ರಾಷ್ಟ್ರೀಯ ಲೋಕ್ ಅದಾಲತ್

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಂದು ಅವಕಾಶ ; ಜುಲೈ 11 ರಂದು ರಾಷ್ಟ್ರೀಯ ಲೋಕ್ ಅದಾಲತ್

ಬಾಕಿ ಉಳಿದಿರುವ ನ್ಯಾಯಾಲಯದ ವ್ಯಾಜ್ಯಗಳು ಹಾಗೂ ನ್ಯಾಯಾಲಯಕ್ಕೆ ಮುನ್ನವೇ ರಾಜಿ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಶೀಘ್ರ ಮತ್ತು ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಮ್ಮೆ ಅವಕಾಶ ದೊರೆತಿದೆ. ಜುಲೈ 11ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಂಗ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಷ್ಟ್ರೀಯ  ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಸಹಾಯವಾಣಿ ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧಲಿಂಗ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ  ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ವತಿಯಿಂದ ನೀಡಲಾಗುವ 2025-26ನೇ ಸಾಲಿನ ಪ್ರತಿಷ್ಠಿತ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ಅರ್ಹ ಮಕ್ಕಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾದ ಸಿಂಧೆ ನಂದಿನಿ ಅವರು ತಿಳಿಸಿದ್ದಾರೆ.

ಧೈರ್ಯ ಮತ್ತು ಸಾಹಸದಿಂದ ಇತರರ ಜೀವ ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳ ಮೂಲಕ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಈ ರಾಷ್ಟಿçÃಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಅರ್ಹ ಹಾಗೂ ಆಸಕ್ತರು ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್ https://awards.gov.in ಮೂಲಕ ಜುಲೈ 31 ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿಧಾಮ ಆವರಣ ಹತ್ತಿರ, ಎನ್.ಸಿ.ಸಿ. ಆವರಣ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿಗೆ ಸಂಪರ್ಕಿಸಬಹುದಾಗಿದೆ.ಮಾಹಿತಿಗಾಗಿ ದೂ.08392-241373 ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular