HomeKarnatakaಹಿರಿಯೂರು ಕ್ಷೇತ್ರ ಬಿಟ್ಟುಕೊಡಲು ಜೆಡಿಎಸ್ ಬಹಿರಂಗ ಬೇಡಿಕೆ: ಬಿಜೆಪಿಯಿಂದ ಇಂದು ಮಹತ್ವದ ಸಭೆ

ಹಿರಿಯೂರು ಕ್ಷೇತ್ರ ಬಿಟ್ಟುಕೊಡಲು ಜೆಡಿಎಸ್ ಬಹಿರಂಗ ಬೇಡಿಕೆ: ಬಿಜೆಪಿಯಿಂದ ಇಂದು ಮಹತ್ವದ ಸಭೆ

ಬೆಂಗಳೂರು: ಹಿರಿಯೂರು ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಎನ್.ಡಿ.ಎ. ಮಿತ್ರ ಪಕ್ಷಗಳಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ ಶುರುವಾದಂತಿದೆ.

ಹಿರಿಯೂರು ಕ್ಷೇತ್ರವನ್ನು ತಮಗೆ ಬಿಟ್ಟು ಕೊಡುವಂತೆ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಹಿರಿಯೂರು ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ಬಿಟ್ಟು ಕೊಡಬೇಕೆಂದು ಹೇಳಿಕೆ ನೀಡಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿಯ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಜೆಡಿಎಸ್ ನಾಯಕರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯೂರು ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ನಾಯಕರ ಜೊತೆಗೆ ಬಿಜೆಪಿ ರಾಧಾಮೋಹನ್ ದಾಸ್ ಅಗರ್ವಾಲ್ ಸಭೆ ನಡೆಸಲಿದ್ದಾರೆ. ಹಿರಿಯೂರು ಉಪ ಚುನಾವಣೆಗೆ ಯಾರು ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಜೆಡಿಎಸ್ ನಾಯಕರ ಜೊತೆಗೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಿರಿಯೂರು ವಿಧಾನಸಭಾ ಉಪ ಚುನಾಯಲ್ಲಿ ಯಾರು ಸ್ಪರ್ಧಿಸಬೇಕೆಂದು ತೀರ್ಮಾನಿಸಲಾಗುವುದು. ಇದರೊಂದಿಗೆ ಸಮನ್ವಯ ಸಮಿತಿ ರಚನೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular