HomeKarnatakaದಾವಣಗೆರೆ ಸೇರಿ ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ದಾವಣಗೆರೆ ಸೇರಿ ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ದಾವಣಗೆರೆ ವಿಶ್ವವಿದ್ಯಾಲಯ ಸೇರಿದಂತೆ ಮೂರು ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರು ಕುಲಪತಿಗಳ ನೇಮಕ ಮಾಡಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯ, ಗದಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳ ನೇಮಕ ಮಾಡಲಾಗಿದೆ.

ಮುಂದಿನ 4 ವರ್ಷಗಳ ಅವಧಿ ಅಥವಾ 65 ವರ್ಷ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲೋ ಅಲ್ಲಿಯವರೆಗೆ ಅನ್ವಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಗುರುವಾರ ನೇಮಕ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ವಿವಿ ಕುಲಪತಿಯಾಗಿ ಬಾಪೂಜಿ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಇ. ರಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಡಾ. ಸುರೇಶ್ ವಿ. ನಾಡಗೌಡರ್ ಅವರನ್ನು ನೇಮಕ ಮಾಡಲಾಗಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಬೆಂಗಳೂರಿನ ACAR –IIHR ಮುಖ್ಯ ವಿಜ್ಞಾನಿ ಡಾ.ಎಂ.ವಿ. ಧನಂಜಯ ಅವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular