HomeKarnatakaBIG NEWS: ಬರಪೀಡಿತ ಪ್ರದೇಶ ಘೋಷಣೆಗೆ ಮಹತ್ವದ ಕ್ರಮ: ಪ್ರಸ್ತಾವನೆ ಸಲ್ಲಿಕೆಗೆ ಸಿಎಸ್ ಸೂಚನೆ

BIG NEWS: ಬರಪೀಡಿತ ಪ್ರದೇಶ ಘೋಷಣೆಗೆ ಮಹತ್ವದ ಕ್ರಮ: ಪ್ರಸ್ತಾವನೆ ಸಲ್ಲಿಕೆಗೆ ಸಿಎಸ್ ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಕೊರತೆ ಹಿನ್ನೆಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತಾಗಿ ಸ್ಥಳ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ನಿರ್ದೇಶನದಂತೆ, ರಾಜ್ಯದಲ್ಲಿ ಸತತ ಮೂರು ವಾರಗಳ ಕಾಲ ಮಳೆಯಾಗದೇ ಇರುವ ಹಾಗೂ ಶೇಕಡ 60ಕ್ಕಿಂತ ಕಡಿಮೆ ಮಳೆಯಾಗಿರುವ ಮತ್ತು ಸರ್ಕಾರ ನಿಗದಿಪಡಿಸಿರುವ ಇತರೆ ಮಾನದಂಡಗಳನ್ನು ಪೂರೈಸಲ್ಪಟ್ಟಿರುವ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.

ಈ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಒಂದು ವಾರದೊಳಗೆ ಸ್ಥಳ ಪರಿಶೀಲನೆ (Ground Truthing) ಪೂರ್ಣಗೊಳಿಸಿ, ಅಗತ್ಯ ಪ್ರಸ್ತಾವನೆ ಗಳನ್ನು ಪಡೆದು ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular