HomeLatest NewsSHOCKING : ಬೆಂಗಳೂರಲ್ಲಿ ರಾಕ್ಷಸಿ ಕೃತ್ಯ ; ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು...

SHOCKING : ಬೆಂಗಳೂರಲ್ಲಿ ರಾಕ್ಷಸಿ ಕೃತ್ಯ ; ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಪಾಪಿ ಪತಿ ಅರೆಸ್ಟ್.!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮಗು ಬೇಡ ಎಂಬ ಕಾರಣಕ್ಕೆ  ಗರ್ಭಿಣಿಪತ್ನಿಯ ಪತ್ನಿ ಮಲಗಿದ್ದ ವೇಳೆ ದುಪ್ಪಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಮೊಹಮದ್ ಪೀರ್ ಎಂದು ಗುರುತಿಸಲಾಗಿದೆ. ಪತ್ನಿ ಹಸೀನಾ ಮೇಲೆ ಆತ ಈ ಹಿಂದೆಯೂ ಹಲವು ಬಾರಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಹಸೀನಾ ಮಲಗಿದ್ದ ವೇಳೆ ಆರೋಪಿ ದುಪ್ಪಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲ್ಲಲು ಯತ್ನಿಸಿದ್ದಾನೆ. ಹಸೀನಾ ಪ್ರಜ್ಞೆ ತಪ್ಪಿದ ಬಳಿಕ ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಸ್ಥಳದಿಂದ ತೆರಳಿದ್ದಾನೆ.

ಆದರೆ ಕೆಲ ಸಮಯದ ಬಳಿಕ ಹಸೀನಾ ಪ್ರಜ್ಞೆ ಪಡೆದು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ತನಿಖೆಯಲ್ಲಿ, ಮೊಹಮದ್ ಪೀರ್‌ಗೆ ಮೊದಲೇ ಮದುವೆಯಾಗಿದ್ದು, ಎರಡು ವರ್ಷಗಳ ಹಿಂದೆ ಹಸೀನಾಳನ್ನು ಎರಡನೇ ಮದುವೆಯಾಗಿದ್ದನು ಎಂಬ ಮಾಹಿತಿ ಬಹಿರಂಗವಾಗಿದೆ. ಮಗು ಬೇಡ ಎಂಬ ಕಾರಣಕ್ಕೆ ಹಸೀನಾಳಿಗೆ ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎನ್ನುವ ಆರೋಪವೂ ಕೇಳಿಬಂದಿದೆ. ಈ ವಿಷಯದಲ್ಲಿ ದಂಪತಿ ನಡುವೆ ಆಗಾಗ ಕಲಹ ನಡೆಯುತ್ತಿದ್ದು, ಹಸೀನಾ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಹಸೀನಾ, “ಇನ್ನು ಮುಂದೆ ಪತಿಯೊಂದಿಗೆ ಬದುಕುವುದಿಲ್ಲ. ನನಗೆ ನ್ಯಾಯ ಬೇಕು” ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕುಟುಂಬ ಕಲಹದ ಹಿನ್ನೆಲೆ ಹಾಗೂ ಗರ್ಭಪಾತಕ್ಕೆ ಒತ್ತಾಯ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular