HomeKarnatakaBREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 8 ಪ್ರಜೆಗಳು ಅರೆಸ್ಟ್: ನಕಲಿ ಆಧಾರ್ ಕಾರ್ಡ್ ಪತ್ತೆ

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 8 ಪ್ರಜೆಗಳು ಅರೆಸ್ಟ್: ನಕಲಿ ಆಧಾರ್ ಕಾರ್ಡ್ ಪತ್ತೆ

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 8 ಪ್ರಜೆಗಳನ್ನು ಬಂಧಿಸಲಾಗಿದೆ. ಸುರತ್ಕಲ್ ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಮಂದಿ ಬಾಂಗ್ಲಾ ಪ್ರಜೆಗಳನ್ನು ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಠಾಣೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ಕಟ್ಟಡದಲ್ಲಿ ಇವರು ಕೆಲಸ ಮಾಡಿಕೊಂಡಿದ್ದರು. ನಿರ್ಮಾಣ ಹಂತದ ಕಟ್ಟಡದ ಕೆಲಸದಲ್ಲಿ 54 ಕಾರ್ಮಿಕರು ತೊಡಗಿಕೊಂಡಿದ್ದರು. 54 ಕಾರ್ಮಿಕರ ದಾಖಲಾತಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಎಂಟು ಮಂದಿ ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದಿರುವುದು ಪತ್ತೆಯಾಗಿದೆ.

ಬಂಧಿತರು ಬಾಂಗ್ಲಾದೇಶದ ರಾಜಶಾಹಿ ವಿಭಾಗದ ಗೋಡಾಗರಿ ನಿವಾಸಿಗಳು ಎನ್ನುವುದು ಪರಿಶೀಲನೆಯ ವೇಳೆ ಗೊತ್ತಾಗಿದೆ. ಮಹಮ್ಮದ್ ಮುಕ್ತಾರ್ ಅಲಿ, ರಖಿಬ್, ಹುಸೇನ್, ಜಹೀರ್ ಹುಸೇನ್, ಬಿಲಾಲ್ ಹುಸೇನ್, ಹಸೀಬುಲ್ ಹಸನ್, ಹಸನ್, ಸೈಪುರ್ ರೆಹಮಾನ್ ಸೇರಿ 8 ಮಂದಿಯನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ತಿಂಗಳ ಹಿಂದೆ ಭಾರತ -ಬಾಂಗ್ಲಾ ಗಡಿ ದಾಟಿದ್ದ ಆರೋಪಿಗಳು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ ನುಸುಳಿದ್ದರು. ಅಲ್ಲಿನ ಸ್ಥಳೀಯ ವಿಳಾಸ ಹೊಂದಿದ್ದ ಆಧಾರ್ ಕಾರ್ಡ್ ಗಳಿಗೆ ತಮ್ಮ ಭಾವಚಿತ್ರ ಅಂಟಿಸಿಕೊಂಡಿದ್ದರು. ಕಲರ್ ಜೆರಾಕ್ಸ್ ಮೂಲಕ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡಿದ್ದರು.

ಕಳೆದ ಎರಡು ತಿಂಗಳಿನಿಂದ ಮುಕ್ಕ ಭಾಗದಲ್ಲಿ ವಾಸಿಸುತ್ತಿದ್ದರು. ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು. ಸಂಶಯದ ಮೇರೆಗೆ ಇವರನ್ನು ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಾಂಗ್ಲಾದೇಶದ ನ್ಯಾಷನಲ್ ಐಡಿ ಕಾರ್ಡ್, ಜನನ ಪ್ರಮಾಣ ಪತ್ರ ಮತ್ತು ಆರೋಪಿಗಳ ಕುಟುಂಬದ ಇತರೆ ದಾಖಲೆಗಳು ಪತ್ತೆಯಾಗಿವೆ. ಕೂಲಿ ಕೆಲಸಕ್ಕಾಗಿ ಬಾಂಗ್ಲಾ ಪ್ರಜೆಗಳು ಮಂಗಳೂರಿಗೆ ಬಂದಿರುವುದು ದೃಢಪಟ್ಟಿದೆ. ಬೆಂಗಳೂರಿನ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ವರದಿ ಸಲ್ಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular