HomeLatest NewsSHOCKING : ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಆರೋಪಿ ಅಟ್ಟಹಾಸ ; ಚಾಕು ಇರಿದು ಪತ್ನಿ, ಇಬ್ಬರು...

SHOCKING : ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಆರೋಪಿ ಅಟ್ಟಹಾಸ ; ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯಲ್ಲಿ ಪೋಕ್ಸೋ (POCSO) ಪ್ರಕರಣದ ಆರೋಪಿ ಒಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ಧ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಆರೋಪಿಯನ್ನು ಬಿ. ರಾಜ್‌ಕುಮಾರ್ (35) ಎಂದು ಗುರುತಿಸಲಾಗಿದ್ದು, ಶುಕ್ರವಾರ ಮಧ್ಯರಾತ್ರಿ ಹಾಗೂ ಶನಿವಾರ ಮುಂಜಾನೆ ಎರಡು ವಿಭಿನ್ನ ಸ್ಥಳಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆಗಳಿಗೆ ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೊದಲು ಪತ್ನಿ ಮತ್ತು ಮಕ್ಕಳ ಹತ್ಯೆ

ರಾಜ್‌ಕುಮಾರ್ ಮೊದಲು ಶಾಬಾದ್‌ನಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಪಾರ್ವತಿ ಸರಿತಾ (30) ಹಾಗೂ ನಾಲ್ಕು ವರ್ಷದ ಮಗ ಮತ್ತು 18 ತಿಂಗಳ ಕಿರಿಯ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ದೂರು ನೀಡಿದ್ದ ಬಾಲಕಿ ಹಾಗೂ ಕುಟುಂಬದವರ ಹತ್ಯೆ

ಅದಾದ ಬಳಿಕ ಸುಮಾರು ಆರು ಕಿಲೋಮೀಟರ್ ದೂರದ ಮತ್ತೊಂದು ಗ್ರಾಮಕ್ಕೆ ತೆರಳಿದ ಆರೋಪಿ, ತನ್ನ ವಿರುದ್ಧ 2026ರ ಮೇ 16ರಂದು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದ 17 ವರ್ಷದ ಬಾಲಕಿ, ಆಕೆಯ ತಾಯಿ ಹಾಗೂ ಅಜ್ಜಿಯನ್ನು ಸಹ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಪೊಲೀಸರ ಪ್ರಕಾರ, ರಾಜ್‌ಕುಮಾರ್ ವಿರುದ್ಧ ಈ ಹಿಂದೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಘಟನೆ ನಡೆದಾಗ ಆತ ಜಾಮೀನಿನ ಮೇಲೆ ಹೊರಗಿದ್ದನು.

ಕೊಲೆ ಬಳಿಕ ಕುಟುಂಬಕ್ಕೆ ಕರೆ ಮಾಡಿ ಆತ್ಮಹತ್ಯೆ ಬೆದರಿಕೆ

ಆರು ಮಂದಿಯನ್ನು ಹತ್ಯೆ ಮಾಡಿದ ಬಳಿಕ ರಾಜ್‌ಕುಮಾರ್ ತನ್ನ ತಂದೆ ಹಾಗೂ ಇತರ ಕುಟುಂಬ ಸದಸ್ಯರಿಗೆ ಕರೆ ಮಾಡಿ, ಎರಡೂ ಕುಟುಂಬದವರನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಫ್ಯೂಚರ್ ಸಿಟಿ ಪೊಲೀಸ್ ಆಯುಕ್ತ ತರುಣ್ ಜೋಶಿ ಮಾತನಾಡಿ, “ಪ್ರಾಥಮಿಕ ತನಿಖೆಯ ಪ್ರಕಾರ ಆರೋಪಿ ರಾತ್ರಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕೊಲೆಗಳನ್ನು ಎಸಗಿದ್ದಾನೆ. ನಂತರ ತನ್ನ ತಂದೆಗೆ ಕರೆ ಮಾಡಿ ನಡೆದಿರುವ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ” ಎಂದು ಹೇಳಿದ್ದಾರೆ.

ಆರೋಪಿಗಾಗಿ ವಿಶೇಷ ಪೊಲೀಸ್ ತಂಡಗಳ ಶೋಧ

ಘಟನೆಯ ಬಳಿಕ ರಾಜ್‌ಕುಮಾರ್ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಲವು ಸುಳಿವುಗಳು ದೊರೆತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಆರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

2018ರಲ್ಲಿ ಪ್ರೇಮ ವಿವಾಹ

ರಾಜ್‌ಕುಮಾರ್ ಮತ್ತು ಪಾರ್ವತಿ ಸರಿತಾ ಅವರು 2018ರಲ್ಲಿ ಪ್ರೇಮ ವಿವಾಹವಾಗಿದ್ದರು. ಆರಂಭದಲ್ಲಿ ಗ್ರಾಮದಿಂದ ಹೊರಗೆ ವಾಸವಿದ್ದ ದಂಪತಿ, ನಂತರ ಶಾಬಾದ್ ಹಾಗೂ ದೇವಲಗೂಡದಲ್ಲಿರುವ ತಮ್ಮ ಮನೆಗಳಲ್ಲಿ ನೆಲೆಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular