HomeKarnatakaBREAKING: ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ಎಡವಟ್ಟು: ಹೆರಿಗೆ ಬಳಿಕ ತಾಯಿ ತೀವ್ರ ರಕ್ತಸ್ರಾವದಿಂದ ಸಾವು

BREAKING: ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ಎಡವಟ್ಟು: ಹೆರಿಗೆ ಬಳಿಕ ತಾಯಿ ತೀವ್ರ ರಕ್ತಸ್ರಾವದಿಂದ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಬಾಣಂತಿ ಬಲಿಯಾಗಿರುವ ಘಟನೆ ನಡೆದಿದೆ. ಸೂಕ್ತ ರೀತಿಯಲ್ಲಿ ಹೆರಿಗೆ ಮಾಡಿಸದ ಪರಿಣಾಮ ಬಾಣಂತಿ ಸಾವನ್ನಪಿರುವುವ ಆರೋಪ ಕೇಳಿಬಂದಿದೆ.

ಹೊಸನಗರದ ಕೋಡೂರು ಗ್ರಾಮದ ಸುಮಾ ಮೃತ ಬಾಣಂತಿ. ತುಂಬು ಗರ್ಭಿಣಿಯಾಗಿದ್ದ ಸುಮಾ ಅವರಿಗೆ ತಾಲೂಕು ಆಸ್ಪತ್ರೆ ವೈದ್ಯರು ಸಹಜ ಹೆರಿಗೆ ಮಾಡಿಸಿದ್ದರು. ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಸುಮಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಮಾ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದಲೇ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಸುಮಾ ಕುಟುಂಬದವರು ಆರೋಪಿಸಿದ್ದಾರೆ. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular